ಅರವಿಂದ ಲಿಂಬಾವಳಿ ಅಶ್ಲೀಲ ವಿಡಿಯೋ ನಕಲಿ: ವಿಧಿ ವಿಜ್ಞಾನ ಪ್ರಯೋಗಾಲಯ
ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.

ಬೆಂಗಳೂರು: ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.
ಈ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಇಲಾಖೆ ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಿ ನಕಲಿ ವಿಡಿಯೊ ಎಂದು ವರದಿ ನೀಡಿದೆ.
ಸೋಮವಾರ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಈ ವರದಿಯನ್ನು ಮಾರತ್ ಹಳ್ಳಿ ಉಪವಿಭಾಗದ ಎಸಿಪಿ ಅವರಿಗೆ ತಿಳಿಸಿದ್ದಾರೆ. ವಿಡಿಯೋದಲ್ಲಿ ಸತ್ಯವಿಲ್ಲ ಎಂದು ಹೇಳಿದೆ
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಅರವಿಂದ ಲಿಂಬಾವಳಿ ಅವರ ಬಹುಮುಖ್ಯ ಪಾತ್ರವಿದೆ. ಆದರೆ, ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದು ಬಿಜೆಪಿ ಪಕ್ಷದ ಒಳಗಿನ ಕೆಲ ನಾಯಕರಿಗೆ ಇಷ್ಟವಿರಲಿಲ್ಲ. ಅವರು ಬೇರೆ ಪಕ್ಷದವರು ಅಧಿಕಾರದಲ್ಲಿ ಇರಲಿ ಎನ್ನುವ ದುರುದ್ದೇಶ ಹೊಂದಿದ್ದರು ಎಂದು ಹೇಳಲಾಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


