ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಯಡಿಯೂರಪ್ಪ ಭೇಟಿ, ಸಿಎಂ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ
ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.

ಮಂಡ್ಯ: ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.
ಆದಿಚುಂಚನಗಿರಿಯಲ್ಲಿನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಯವರು ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮಠದ ಶ್ರೀ ನಿರ್ಮಲಾನಂದ ಸ್ವಾಮಿ ಅವರು ಮುಖ್ಯಮಂತ್ರಿಯವರಿಗೆ ಭವ್ಯ ಸ್ವಾಗತ ಕೋರಿದರು.
ಕುತೂಹಲ ಸಂಗತಿ ಎಂದರೆ, ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ ಮುಖ್ಯಮಂತ್ರಿ ಪಾದ ಮುಟ್ಟಿ ಆಶೀರ್ವಾದ ಕೋರಿದರು. ಮುಖ್ಯಮಂತ್ರಿಯವರೊಂದಿಗೆ ಸಚಿವರಾದ ಆರ್.ಅಶೋಕ್ ಮತ್ತು ಕೆ.ಆರ್.ಪೇಟೆಯಿಂದ ಉಪಚುನಾವಣೆಯಲ್ಲಿ ಪುನರಾಯ್ಕೆಯಾಗಿರುವ ಶಾಸಕ ನಾರಾಯಣಗೌಡ ಇದ್ದರು.
ಬಳಿಕ ಜೆಡಿಎಸ್‍ನ ಭದ್ರಕೋಟೆ ಎನಿಸಿದ್ದ ಕೆ.ಆರ್.ಪೇಟೆಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದರು. ಆ ನಂತರ ಅವರು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


