ರಾಜ್ಯ

ನಿತ್ಯಾನಂದ  ವಿರುದ್ಧದ  ಅತ್ಯಾಚಾರ ಆರೋಪ ವಿಚಾರಣೆಗೆ ಹೈಕೋರ್ಟ್ ತಡೆ

ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

ನಿತ್ಯಾನಂದ  ವಿರುದ್ಧದ  ಅತ್ಯಾಚಾರ ಆರೋಪ ವಿಚಾರಣೆಗೆ ಹೈಕೋರ್ಟ್ ತಡೆ
ನಿತ್ಯಾನಂದ
Published On :

ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

ರಾಮನಗರದ ಸೆಷನ್ಸ್ ಕೋರ್ಟ್‌‌ನಲ್ಲಿ ಸೂಕ್ತವಾಗಿ ವಿಚಾರಣೆ ಆಗದ ಕಾರಣ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿ‌ ದೂರುದಾರ ಲೆನಿನ್ ಹೈಕೋರ್ಟ್‌‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ಪೀಠ ಪ್ರಕರಣಕ್ಕೆ ಸಂಬಂಧಿಸಿದ ರಾಮನಗರ ಕೋರ್ಟ್ ನಲ್ಲಿರುವ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಲು‌ ರಿಜಿಸ್ಟ್ರಾರ್ ಗೆ ಸೂಚಿಸಿದೆ.

ಕೆಲವು ದಿನಗಳ ಹಿಂದೆ ರಾಮನಗರ ನ್ಯಾಯಾಲಯ ಅತ್ಯಾಚಾರ ಪ್ರಕರಣದ ವಿಚಾರಣೆಗೆ ನಿತ್ಯಾನಂದ ಸ್ವಾಮಿ ಖುದ್ದಾಗಿ ಹಾಜರಾಗಬೇಕಾದ ಅವಶ್ಯಕತೆ ಇಲ್ಲ. ಗೈರು ಹಾಜರಿಯಲ್ಲಿ ವಿಚಾರಣೆ ಮುಂದುವರೆಸಬಹುದು ಎಂದು ಹೇಳಿತ್ತು. ಈಗ ವಿಚಾರಣೆಗೆ ತಡೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.