ರಾಜ್ಯ

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣು

ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಮೃತರ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದ್ದು, ಸಾವಿನ ಬಗ್ಗೆ ಮೃತರ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆಯ ಹಿಂಡಿಗನಾಳ ನಿವಾಸಿ ಶಿಲ್ಪಾ (27) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ.  ನಾಗೇಶ್ ಎಂಬವರನ್ನು ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಶಿಲ್ಪಾ ಅವರ ಮೃತದೇಹ ಹೂಡಿಯ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಮಹದೇವಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ದಂಪತಿ ನಡುವೆ ಇತ್ತೀಚೆಗೆ ಆಗಾಗ ಜಗಳ ಉಂಟಾಗುತ್ತಿತ್ತು. ಪತಿಯ ಮನೆಯವರು ಆಕೆಗೆ ಕಿರುಕುಳ ನೀಡುತ್ತಿದ್ದರು. ಈ ಹಿಂದೆ ಎರಡೂ ಕುಟುಂಬದ ಹಿರಿಯರನ್ನು ಕರೆಸಿ ಇಬ್ಬರಿಗೂ ಬುದ್ದಿವಾದ ಹೇಳಲಾಗಿತ್ತು. ಆದರೆ ಈಗ ಆಕೆಯನ್ನು ಪತಿಯ ಕಡೆಯುವರು ನೇಣು ಹಾಕಿ ಕೊಂದಿದ್ದಾರೆ ಎಂದು ಮೃತಳ ಪೋಷಕರು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.