ರಾಜ್ಯ

ಗುಂಡ್ಲುಪೇಟೆ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನ

ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ‌ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಗುಂಡ್ಲುಪೇಟೆ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನ
ಸಂಗ್ರಹ ಚಿತ್ರ
Published On :

ಚಾಮರಾಜನಗರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ‌ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿ‌ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಪಟ್ಟಣದ ಸುರಭಿ ಹೋಟೆಲ್ ಮೇಲೆ ಗುಂಡ್ಲುಪೇಟೆ ಪೊಲೀಸರು ದಾಳಿ ನಡೆಸಿದ್ದರು. 

ಈ ವೇಳೆ ಮೂವರು ಮಹಿಳೆಯರನ್ನು ರಕ್ಷಿಸಿ ಕೇರಳ ಮೂಲದ ಅಬ್ದುಲ್ ರಶೀದ್ ಹಾಗೂ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ.ಲಾಟರಿ ಹಾಗೂ ವೇಶ್ಯಾವಾಟಿಕೆ ಅಡ್ಡೆಗಳು ಪಟ್ಟಣದಲ್ಲಿ ಹೆಚ್ಚಾಗಿರುವ ಕುರಿತು ಆರೋಪ ಕೇಳಿ ಬರುತ್ತಿರುವ ನಡುವೆಯೇ ಪಟ್ಟಣದ ಮುಖ್ಯಭಾಗದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿರುವುದು ಕಳವಳಕಾರಿ. ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:-ಗೂಳಿಪುರ ನ೦ದೀಶ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.