ಗಾಂಜಾ ಮಾರಾಟ; ಒರಿಸ್ಸಾ ಮೂಲದ ಆರೋಪಿ ಸೆರೆ; 15 ಕೆ.ಜಿ.ಗಾಂಜಾ ವಶ
ಒರಿಸ್ಸಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾರತ್‌ಹಳ್ಳಿ ಪೊಲೀಸರು ಆತನಿಂದ 5 ಲಕ್ಷ ರೂ. ಮೌಲ್ಯದ 15 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಒರಿಸ್ಸಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾರತ್‌ಹಳ್ಳಿ ಪೊಲೀಸರು ಆತನಿಂದ 5 ಲಕ್ಷ ರೂ. ಮೌಲ್ಯದ 15 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಒರಿಸ್ಸಾದ ರಾಯಗಡ ಜಿಲ್ಲೆಯ ಬಿಸ್ಸಂಕಟ್ಟಕ್ ಠಾಣಾ ವ್ಯಾಪ್ತಿಯ ಕೊಡಗುಲಾಮಿ ಗ್ರಾಮದ ನಿವಾಸಿ ಕಿರದ್ ಮಿಶಾಲ್ (35) ಬಂಧಿತ ಆರೋಪಿ. ಈತ ಒರಿಸ್ಸಾ ರಾಜ್ಯದಿಂದ ರೈಲು ಮೂಲಕ ಬೆಂಗಳೂರಿಗೆ ಅಪರ ಪ್ರಮಾಣದಲ್ಲಿ ಗಾಂಜಾವನ್ನು ಲಗ್ಗೇಜ್ ಟ್ರಾವೆಲ್ ಬ್ಯಾಗ್‌ನಲ್ಲಿ ತಂದು ಮಾರಾಟ ಮಾಡುತ್ತಿದ್ದ.
ನಗರದ ಐಟಿ ಟೆಕ್‌ಪಾರ್ಕ್, ಕಾಲೇಜುಗಳು, ಪಿಜಿಗಳು ಇರುವ ಜನದಟ್ಟಣೆ ಪ್ರದೇಶಗಳಲ್ಲಿ ಸ್ಥಳೀಯ ಗಾಂಜಾ ಪೆಡ್ಲರ್‌ಗಳಿಗೆ ಈತ ನಿರಂತರ ಗಾಂಜಾವನ್ನು ಮಾರಾಟ ಮಾಡುತ್ತಿದ್ದ.
ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ವಶಕ್ಕೆ ಪಡೆದು ಆತನಿಂದ 5 ಲಕ್ಷ ರೂ. ಮೌಲ್ಯದ 15 ಕೆ.ಜಿ.ಯಷ್ಟು ಅಪಾರ ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


