ರಾಜ್ಯ

ಮಂಗಳೂರು: ಎರಡು ಪ್ರತ್ಯೇಕ ರಸ್ತೆ ಅಪಘಾತ, ನಾಲ್ವರು ಸಾವು

ಜಿಲ್ಲೆಯ ಎರಡು ಕಡೆ ಭಾನುವಾರ ಸಂಜೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಮಂಗಳೂರು: ಎರಡು ಪ್ರತ್ಯೇಕ ರಸ್ತೆ ಅಪಘಾತ, ನಾಲ್ವರು ಸಾವು
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ಜಿಲ್ಲೆಯ ಎರಡು ಕಡೆ ಭಾನುವಾರ ಸಂಜೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 

ಬೆಳ್ತಂಗಡಿ ತಾಲ್ಲೂಕಿನ ಮಂಜೊಟ್ಟಿಯಲ್ಲಿ ಸಂಭವಿಸಿದ ಮೊದಲ ಅಪಘಾತದಲ್ಲಿ  ಟ್ರಕ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರನ್ನು ಸೇಸಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ಕಲ್ಯಾಣಿ(55) ಎಂದು ಗುರುತಿಸಲಾಗಿದ್ದು, ಇಬ್ಬರೂ ನಾವೂರು ನಿವಾಸಿಗಳಾಗಿದ್ದಾರೆ. 

ಸೇಸಪ್ಪ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡ ಕಲ್ಯಾಣಿ, ಮಂಗಳೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಬೆಳ್ತಂಗಡಿ ಸಂಚಾರ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. 

ಮತ್ತೊಂದು ಅಪಘಾತದಲ್ಲಿ ಮಂಜೇಶ್ವರ ಸಮೀಪದ ಕರೋಡದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‍ಆರ್ ಟಿಸಿ ಬಸ್‍ವೊಂದು ಬೈಕ್‍ಗೆ ಡಿಕ್ಕಿ ಹೊಡೆದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‍ಆರ್ ಟಿಸಿ ಬಸ್, ಕುಂಜತೂರಿನಿಂದ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದು, ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ವ್ಯಕ್ತಿ ಮಂಗಳೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.