ರಾಜ್ಯ

ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ 

ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ನಾಗರಿತ್ವ ನೀಡುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ದೆಹಲಿಯ ಜಾಮೀಯಾ ಕಾಲೇಜಿನಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸೋಮವಾರ ಬೃಹತ್ ಪ್ರತಿಭಠನೆ ನಡೆಸಲಾಗಿದೆ.

ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ 
ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ
Published On :

ಬೆಂಗಳೂರು: ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ನಾಗರಿತ್ವ ನೀಡುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ದೆಹಲಿಯ ಜಾಮೀಯಾ ಕಾಲೇಜಿನಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಮೈಸೂರು, ಬೆಂಗಳೂರು ಸೇರಿ ರಾಜ್ಯದ  ವಿವಿಧೆಡೆ ಸೋಮವಾರ ಬೃಹತ್ ಪ್ರತಿಭಠನೆ ನಡೆಸಲಾಗಿದೆ. 

ಕಾಯ್ದೆ ವಿರುದ್ಧ ಬಳ್ಳಾರಿಯಿಂದ ಬೆಂಗಳೂರು ಹಾಗೂ ಮೈಸೂರಿನಿಂದ ಮಂಗಳೂರುನಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಇದೇ ವೇಳೆ ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರ ಲಾಠಿ ಪ್ರಹಾರಕ್ಕೂ ವಿರೋಧ ವ್ಯಕ್ತಪಡಿಸಿದರು. 

ಐಎಎಸ್ ಮಾಜಿ ಅಧಿಕಾರಿ ಶಶಿಕಾಂತ್ ಸೆಂಥಿಲ್ ಮಾತನಾಡಿ, ದೇಶದ ಇತಿಹಾಸದಲ್ಲಿಯೇ ಇದೊಂದು ಕರಾಳ ದಿನವಾಗಿದ್ದು, ಪ್ರತಿಭಟನೆ ಅಗತ್ಯವಿತ್ತು. ಕೇಂದ್ರದ ಆಡಳಿತ ವಿಶ್ವವಿದ್ಯಾಲಯಗಳು ಹಾಗೂ ಸ್ವತಂತ್ರ ಸಂಸ್ಥೆಗಳ ವಿರುದ್ಧವಾಗಿದೆ. ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳನ್ನು ಹಿಮ್ಮೆಟ್ಟಿಸುವುದು ಹೊಡೆಯುವುದು ನಿಜಕ್ಕೂ ನಾಚಿಕೆಗೇಡುತನ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಒಗ್ಗೂಡಬೇಕೆಂದು ಹೇಳಿದ್ದಾರೆ. 

ಪ್ರತಿಭಟನೆ ನಡೆಸುವ ಹಕ್ಕು ನಮಗಿದೆ
ಸದನದಲ್ಲಿ ಬಹುಮತ ಇದ್ದ ಮಾತ್ರಕ್ಕೆ ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಬಿಜೆಪಿ ಮಸೂದೆಗೆ ಅಂಗೀಕಾರ ಪಡೆಯುವ ಹಾಗಿಲ್ಲ. ಕಾನೂನು ವಿರುದ್ಧ ಪ್ರತಿಭಟನೆ ನಡೆಸುವ ಹಕ್ಕು ನಮಗಿದೆ. ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಇಡೀ ದೇಶವಿದೆ ಎಂಬುದನ್ನು ಅವರಿಗೆ ತಿಳಿಸಲು ನಾವಿಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆಂದು ಜಯನಗರ ಶಾಸಕಿ ಸೌಮ್ಯ ರೆಡ್ಡಿಯವರು ಹೇಳಿದ್ದಾರೆ. 

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಬಲವಂತವಾಗಿ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗುವಂತೆ ಹೇಳುತ್ತಿದ್ದಾರೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿಯೂ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಕಾಯ್ದೆಯನ್ನು ರದ್ದು ಮಾಡುವಂತೆ ಆಗ್ರಹಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ತನ್ವೀರ್ ಅಹ್ಮದ್ ಅವರು ಹೇಳಿದ್ದಾರೆ. 

ಇನ್ನು ಮೈಸೂರಿನಲ್ಲಿ ನಿಷೇಧಾಜ್ಞೆ ಆಗೇಳಗ ನಡುವಯೂ 6000ಕ್ಕೂ ಹೆಚ್ಚು ಮಂದಿ ಕೇಂದ್ರ ಸರ್ಕಾರದ ವಿರುದ್ಧ ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್ ನಿಂದ ಧರಣಿ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.