ಧಾರವಾಡ: 36 ವರ್ಷಗಳ ನಂತರ ಕೊನಗೂ ಕಳ್ಳನನ್ನು ಹಿಡಿದ ಪೊಲೀಸರು
ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.
ಧಾರವಾಡದ ಎತ್ತಿನಗುಡ್ಡ ಗ್ರಾಮದ ಶಂಕರಪ್ಪ ಜೋಗ್ದೇರಿ ಬಂಧಿತ ಆರೋಪಿ. ಈತ 1983 ರಲ್ಲಿ ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. 2 ದಿನಗಳ ಹಿಂದೆ ಆತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
7 ಮಂದಿ ವಿರುದ್ಧ ಭತ್ತದ ಮಾಲೀಕರು ದೂರು ದಾಖಲಿಸಿದ್ದರು, ಉಳಿದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು , ಒಬ್ಬ ನಾಪತ್ತೆಯಾಗಿದ್ದ.
ಬಾಕಿ ಉಳಿದ ಪ್ರಕರಣಗಳನ್ನು ಕ್ಲಿಯರ್ ಮಾಡುವಂತೆ ಇತ್ತೀಚೆಗೆ ಜಿಲ್ಲಾ ಪೊಲೀಸ್ ಎಸ್ ಪಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ತಂಡ ರಚಿಸಿದ್ದ ಪೊಲೀಸರು ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


