ಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ
ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.

ಬೆಂಗಳೂರು: ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.
ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ಮೆನನ್ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ಕೈಗೊಂಡಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು. ಆದರೆ, ಪ್ರಕರಣದಲ್ಲಿ ಸಂತೋಷ್ ಮೆನನ್ ಪಾತ್ರದ ಬಗ್ಗೆ ತಿಳಿಸಲು ಅವರು ನಿರಾಕರಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ವಿವಿಧ ತಂಡಗಳ ಮಾಲೀಕರು, ಕೋಚ್, ಆಟಗಾರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಳ್ಳಾಡಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ್ ರೆಡ್ಡಿ ಅವರನ್ನು ಬುಧವಾರ ಮೂರು ಗಂಟೆಗೂ ಹೆಚ್ಚು ಹೊತ್ತು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.
ಈ ಹಗರಣದಲ್ಲಿ ಸಿನಿಮಾ ನಟಿಯರೂ ಸೇರಿದಂತೆ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದೆ. ಅವರೆಲ್ಲರನ್ನೂ ವಿಚಾರಣೆ ನಡೆಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


