ಅರ್ಹ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಹುದ್ದೆ ಲಭಿಸಿಲ್ಲ: ಶಂಕರಮೂರ್ತಿ
ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಏನು ಪ್ರಯೋಜನ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಮಾ ಜೋಯಿಸ್ ಅವರಿಗೆ ಮಾತ್ರ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆ ನಂತರ ಯಾರಿಗೂ ಅವಕಾಶ ಒದಗಿ ಬಂದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅರ್ಹರಿದ್ದರೂ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನನಗಾಗಲೇ 75 ವರ್ಷ ವಯಸ್ಸಾಗಿದೆ. ಹೀಗಾಗಿ ನನಗೆ ಆ ಹುದ್ದೆ ನೀಡಲು ಸಾಧ್ಯವಿಲ್ಲ, ರಾಜ್ಯದವರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ತಾವೂ ರಾಜ್ಯಪಾಲರ ಹುದ್ದೆ ಅಲಂಕರಿಸುವ ಕುರಿತು ಸುದ್ದಿ ಹರಡಿತ್ತು. ಅದು ನಿಜವಾಗಲಿಲ್ಲ ಎಂದು ಅಳಲು ತೋಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


