ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ: ಕರ್ನಾಟಕದಲ್ಲಿ 144 ಸೆಕ್ಷನ್ ಜಾರಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ: ಕರ್ನಾಟಕದಲ್ಲಿ 144 ಸೆಕ್ಷನ್ ಜಾರಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯಸಭೆ ಸದಸ್ಯರಾದ ರಾಜೀವ್ ಗೌಡ, ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ ಅವರು ರಾಜ್ಯ ಪೊಲೀಸ್ ಇಲಾಖೆ ಜಾರಿಗೊಳಿಸರುವ ನಿಷೇಧಾಜ್ಞೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 

ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್ ನ  ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ನಾಳೆ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ವಿಚಾರಣೆಯನ್ನು ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.