ಪ್ರತ್ಯೇಕ ಪ್ರಕರಣ: ನೋವಿನ ಬಾಧೆಗೆ ಯುವಕ, ಸಾಲದ ಸುಳಿಗೆ ರೈತ ಆತ್ಮಹತ್ಯೆ
ಪ್ರತ್ಯೇಕ ಪ್ರಕರಣದಲ್ಲಿ ರೈತ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ರೈತ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದ ಸಿದ್ದರಾಜು(19) ಎಂಬಾತ ನೋವಿನ ಬಾಧೆ ತಾಳಲಾರದೇ ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಆರು ತಿಂಗಳ ಹಿಂದೆಯಷ್ಟೇ ಎಡಗಾಲು ಮಂಡಿಯಲ್ಲಿದ್ದ ಗಂಟೊಂದನ್ನು ಆಪರೇಶನ್ ಮೂಲಕ ತೆಗೆಸಿದ್ದರೂ ನೋವು ನಿವಾರಣೆಯಾಗದಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಸಾಲದ ಬಾಧೆ ತಾಳಲಾರದೇ ಜಿಗುಪ್ಸೆಗೊಂಡ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ರಾಚನಾಯ್ಕ (59) ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಎರಡು ಹೆಣ್ಣು ಎರಡು ಗಂಡು ಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನ ಹೊಂದಿದ್ದ ಮೃತ ರಾಚನಾಯ್ಕ ಬೆಳೆ ಸಾಲ ಮಾಡಿ ಕೈಸುಟ್ಟುಕೊಂಡಿದ್ದರು ಎನ್ನಲಾಗಿದೆ. ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:- ಗೂಳಿಪುರ ನಂದೀಶ ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


