ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ; ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲೂ ಪ್ರತಿಭಟನೆ ನಡೆಸಲಿಚ್ಚಿಸುವವರು ಅನುಮತಿ ಕೋರಿ ಪೊಲೀಸ್ ಆಯುಕ್ತರಿಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ. ಪ್ರತಿಭಟನೆಗಳಿಗೆ ನೀಡಿದ್ದ ಅನುಮತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರು ಪ್ರತಿಭಟನೆಗೆ ಅನುಮತಿ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬೇಕು, ಆ ಅರ್ಜಿಗಳನ್ನು ಮೂರು ದಿನಗಳಲ್ಲಿ ವಿಲೇವಾರಿ ಮಾಡಬೇಕು. ಆಗ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಅನುಮತಿ ನೀಡುವ ಮುನ್ನ ಕಾನೂನು ಪ್ರಕಾರ ಪ್ರಕ್ರಿಯೆ ಅನುಸರಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
ಸಿ ಆರ್ ಪಿಸಿ ಕಲಂ 144 ರಡಿ ಹೊರಡಿಸಿರುವ ಆದೇಶದ ಬಗ್ಗೆ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ವಿಚಾರಣೆಯನ್ನು ಜನವರಿ 7ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


