ಪೌರತ್ವ ಕಾಯ್ದೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಳ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟ ಕಾವೇರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದ್ದು, ಶುಕ್ರವಾರ ಕೂಡ ಪುರಭವನ ವ್ಯಾಪ್ತಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಯಾಗಲಿದ್ದಾರೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟ ಕಾವೇರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದ್ದು, ಶುಕ್ರವಾರ ಕೂಡ ಪುರಭವನ ವ್ಯಾಪ್ತಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಯಾಗಲಿದ್ದಾರೆ.
ನಿಷೇಧಾಜ್ಞೆ ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುತ್ತಿದೆ. ಪ್ರತಿಭಟನೆಗಳಿಗೆ ಅನುಮತಿ ನೀಡಿಲ್ಲ. ಹಾಗಿದ್ದರೂ ಕೆಲವರು ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನಡೆಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಭಟನೆ ಕೇಂದ್ರವಾಗಿರುವ ಪುರಭವನ ವ್ಯಾಪ್ತಿಯಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿದೆ. 50 ಕೆಎಸ್ಆರ್'ಪಿ, 40 ನಗರ ಸಶಸ್ತ್ರ ಮೀಸಲು ಪಡೆಯ ತುಕಡಿಗಳು ಸೇರಿದಂತೆ 4 ಸಾವಿರ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಪೌರತ್ವ ಕಾಯ್ದೆ ಜಾರಿ ವಿರುದ್ಧ ಪ್ರತಿಭಟನೆ ಮುಂದುವರೆಸುವ ಆಲೋಚನೆಯಲ್ಲಿದ್ದ ಎಡಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಮುಸ್ಲಿಂ ಸಂಘಟನೆಗಳು ಒಂದೆರಡು ದಿನ ತಾತ್ಕಾಲಿಕ ವಿರಾಮ ನೀಡಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ.
ಹಾಗಾಗಿ ಶುಕ್ರವಾರ ಯಾವುದೇ ಪ್ರತಿಭಟನೆ ನಡೆಯುವುದು ಅನುಮಾನ. ಈ ಮಧ್ಯೆ ಎಸ್ಎಫ್ಐ ಸೇರಿದಂತೆ ಕೆಲ ಸಂಘಟನೆಗಳು ಶುಕ್ರವಾರ ಇದೇ ವಿಚಾರ ಕುರಿತು ಚರ್ಚೆಗೆ ಸಭೆ ನಡೆಸಲು ಮುಂದಾಗಿದ್ದವಾದರೂ, ಇದಕ್ಕೆ ಪೊಲೀಸರು ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಆದರೂ ಸಭೆ ನಡೆಸುವ ಚಿಂತನೆಯಲ್ಲಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


