ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್ ನಿಯೋಗ ಪೊಲೀಸರ ವಶಕ್ಕೆ; ಸಿದ್ದರಾಮಯ್ಯ ಭೇಟಿ ರದ್ದು
ಗೋಲಿಬಾರ್ ಹಾಗೂ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳೂರು: ಗೋಲಿಬಾರ್ ಹಾಗೂ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರು ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿ, ಶುಕ್ರವಾರ ಬೆಳಿಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಎಂ.ಬಿ ಪಾಟೀಲ್ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದ ಮೊದಲ ತಂಡ ತೆರಳಿತ್ತು.
ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾಂಗ್ರೆಸ್ ನಿಯೋಗ ಗೋಲಿಬಾರ್‌ನಲ್ಲಿ ಮೃತಪಟ್ಟವರ ನಿವಾಸಕ್ಕೆ ತೆರಳಲು ಮುಂದಾದಾಗ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಆದರೆ ಕಾಂಗ್ರೆಸ್ ನಿಯೋಗ ಪಟ್ಟು ಹಿಡಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಮಂಗಳೂರು ವಿಮಾನ ನಿಲ್ದಾಣದಲ್ಲಿಯೇ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು ಮಂಗಳೂರು ನಗರದೊಳಗೆ ಬಿಟ್ಟುಕೊಳ್ಳಲಿಲ್ಲ. ಮಧ್ಯಾಹ್ನದ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಜಮೀರ್ ಅಹ್ಮದ್ ಮತ್ತಿತರರನ್ನೊಳಗೊಂಡ ಮತ್ತೊಂದು ತಂಡ ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿತ್ತು.
ಆದರೆ ವಿಶೇಷ ವಿಮಾನ ಮಂಗಳೂರಿನಲ್ಲಿ ಇಳಿಯಲು ಅನುಮತಿ ನಿರಾಕರಿಸಿದ್ದರಿಂದ ಸಿದ್ದರಾಮಯ್ಯ ಅವರ ಮಂಗಳೂರು ಪ್ರವಾಸ ರದ್ದಾಯಿತು. ಮಂಗಳೂರಿನ ನಗರ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರ ಈ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


