ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಯು ಟಿ ಖಾದರ್ ಅವರೇ ನೇರ ಕಾರಣ: ಸಂಸದ ಪ್ರತಾಪ ಸಿಂಹ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ನಾಗರಿಕರ ಆತ್ಮಕ್ಕೆ ಶಾಂತಿಕೋರುತ್ತೇನೆ, ಇದಕ್ಕೆ ಮಾಜಿ ಸಚಿವ ಯು ಟಿ ಖಾದರ್ ಅವರ ಹೇಳಿಕೆಯೇ ನೇರ ಕಾರಣ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ನಾಗರಿಕರ ಆತ್ಮಕ್ಕೆ ಶಾಂತಿಕೋರುತ್ತೇನೆ, ಇದಕ್ಕೆ ಮಾಜಿ ಸಚಿವ ಯು ಟಿ ಖಾದರ್ ಅವರ ಹೇಳಿಕೆಯೇ ನೇರ ಕಾರಣ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ರಾಜ್ಯಾದ್ಯಂತ ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದರೂ ಕೂಡ ಅದನ್ನು ಉಲ್ಲಂಘಿಸಿ ಗಲಭೆ ಎಬ್ಬಿಸಲು ವ್ಯವಸ್ಥಿತ ಸಂಚು ನಡೆಸಲಾಗಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಮೈಸೂರಿನ ಟೌನ್ ಹಾಲ್ ಬಳಿ ಕೂಡ ಪ್ರತಿಭಟನೆ ನಡೆಸಲು ನೋಡುತ್ತಿದ್ದಾರೆ.
ಇಂದು ರಾಜ್ಯದಲ್ಲಿನ ಪರಿಸ್ಥಿತಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆ. ಗಲಭೆಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


