ರಾಜ್ಯ

ಪೌರತ್ವ ತಿದ್ದುಪಡಿ ಕಾಯ್ದೆ: ಮಸೀದಿಗೆ ಹೋಗಿ ಜನರಲ್ಲಿ ಅರಿವು ಮೂಡಿಸಿದ ಪೊಲೀಸ್ ಅಧಿಕಾರಿ!

ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ, ಈ ಪೊಲೀಸ್ ಅಧಿಕಾರಿ ಮಾಡಿದ್ದು ಕೂಡ ಅದನ್ನೇ. ರಾಜ್ಯದ ಅಲ್ಲಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಎರಡು ಮಸೀದಿಗಳಿಗೆ ಹೋಗಿ ಮುಸಲ್ಮಾನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ: ಮಸೀದಿಗೆ ಹೋಗಿ ಜನರಲ್ಲಿ ಅರಿವು ಮೂಡಿಸಿದ ಪೊಲೀಸ್ ಅಧಿಕಾರಿ!
Published On :

ಬೆಂಗಳೂರು: ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ, ಈ ಪೊಲೀಸ್ ಅಧಿಕಾರಿ ಮಾಡಿದ್ದು ಕೂಡ ಅದನ್ನೇ. ರಾಜ್ಯದ ಅಲ್ಲಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಎರಡು ಮಸೀದಿಗಳಿಗೆ ಹೋಗಿ ಮುಸಲ್ಮಾನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.


ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ರಾಘವೇಂದ್ರ ಅಗರಾ ಮತ್ತು ಅಕ್ಸ ಮಸೀದಿಗಳಿಗೆ ಹೋದಾಗ ಖಾಕಿ ಧಿರಿಸಿನಲ್ಲಿ ಬಂದ ವ್ಯಕ್ತಿ ಬಗ್ಗೆ ಅಲ್ಲಿ ನೆರೆದಿದ್ದವರಿಗೆ ಕುತೂಹಲ ಉಂಟಾಯಿತು. ನಮಾಜ್ ಗೆಂದು ಸುಮಾರು 3ರಿಂದ 4 ಸಾವಿರ ಜನರು ಸೇರಿದ್ದರು.


ಅಲ್ಲಿಗೆ ಹೋದ ಇನ್ಸ್ ಪೆಕ್ಟರ್ ರಾಘವೇಂದ್ರ, ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ, ಏನೇ ಮಾಡುವುದಿದ್ದರೂ ಮೊದಲು ನಿಜವಾದ ಸಂಗತಿಯೇನೆಂದು ತಿಳಿದುಕೊಂಡು ಮುಂದುವರಿಯಿರಿ, ಏನಾದರೂ ಸಂದೇಹಗಳು ಬಂದರೆ ಬಂದು ನಮ್ಮ ಬಳಿ ಮೊದಲು ವಿಷಯ ತಿಳಿದುಕೊಳ್ಳಿ, ತಪ್ಪು ದಾರಿಗಿಳಿಯಬೇಡಿ ಎಂದರು.

Story image


ರಾಘವೇಂದ್ರ ಮೂಲತಃ ಚಿಕ್ಕಮಗಳೂರಿನವರು, 2003ರಲ್ಲಿ ಪೊಲೀಸ್ ಸೇವೆಗೆ ಸೇರಿ ಅನೇಕ ಕಡೆಗಳಲ್ಲಿ ಇದುವರೆಗೆ ಕೆಲಸ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಹೆಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.


ಈ ಬಗ್ಗೆ ಮಾತನಾಡಿದ ಇನ್ಸ್ ಪೆಕ್ಟರ್ ರಾಘವೇಂದ್ರ, ಹಲವರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಗೊತ್ತಿಲ್ಲ. ಸುಮ್ಮನೆ ಗಲಾಟೆಯಾಗುತ್ತಿದೆ. ಇದಕ್ಕಾಗಿ ಶುಕ್ರವಾರ ವೇಳೆ ಮಸೀದಿ ಬಳಿ ಹೋಗಿ ಜನರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದೆ ಎಂದರು.


ರಾಘವೇಂದ್ರ ಅವರು ತಮ್ಮ ವಿರಾಮದ ಸಮಯದಲ್ಲಿ ಹೀಗೆ ಬೇರೆ ಬೇರೆ ವಿಷಯಗಳ ಕುರಿತು ಮಹಿಳೆಯರು, ಮಕ್ಕಳು, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಾರೆ. ಇತ್ತೀಚೆಗೆ ಮಹಿಳೆಯರಿಗೆ ಸುರಕ್ಷಾ ಆಪ್ ಬಗ್ಗೆ ಅರಿವು ಮೂಡಿಸಿದ್ದರು.

ಕಾನೂನು ಪದವಿ ಪಡೆದಿರುವ ಇನ್ಸ್ ಪೆಕ್ಟರ್ ರಾಘವೇಂದ್ರ, ಸ್ವತಃ ಕವಿ. ಪತ್ರಕರ್ತನಾಗಬೇಕೆಂಬ ಕನಸು ಕಂಡಿದ್ದರು. ಆದರೆ ಆದದ್ದು ಪೊಲೀಸ್ ಅಧಿಕಾರಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.