ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನ: ಸ್ವಾಮಿ ವಿವೇಕಾನಂದಗೆ ಪುಷ್ಪ ನಮನ
ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗಿನ ಗಾಜಿನ ಮನೆಯಲ್ಲಿ ಜ.17 ರಿಂದ 26ರ ವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಬಾರಿ ಸ್ವಾಮಿ ವಿವೇಕಾನಂದರಿಗೆ ಪ್ರದರ್ಶನವನ್ನು ಅರ್ಪಿಸಲಾಗಿದೆ.

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗಿನ ಗಾಜಿನ ಮನೆಯಲ್ಲಿ ಜ.17 ರಿಂದ 26ರ ವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಬಾರಿ ಸ್ವಾಮಿ ವಿವೇಕಾನಂದರಿಗೆ ಪ್ರದರ್ಶನವನ್ನು ಅರ್ಪಿಸಲಾಗಿದೆ.
ಅಮೆರಿಕದ ಚಿಕಾಗೊದಲ್ಲಿ ನಡೆದ ಸರ್ವಧರ್ಮ ಸಂಸತ್‌ನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಭಾಷಣಕ್ಕೆ 126 ವರ್ಷ ಸಲ್ಲುತ್ತಿದೆ. ಇದರ ಸವಿನೆನಪಿಗಾಗಿ ಸ್ವಾಮಿ ವಿವೇಕಾನಂದರ ಹೂವಿನ ಆಕರ್ಷಕ ಪ್ರತಿಮೆಯನ್ನು ನಿರ್ಮಿಸುವ ಮೂಲಕ ಸ್ವಾಮಿ ವಿವೇಕಾನಂದರು ಮತ್ತು ಅವರ ಚಿಂತನೆಗಳನ್ನು ಲಾಲ್‌ಬಾಗ್‌ನಲ್ಲಿ ಪ್ರತಿನಿಧಿಸಲು ನಿರ್ಧರಿಸಲಾಗಿದೆ.
ಸ್ವಾಮಿ ವಿವೇಕಾನಂದರ ತತ್ವ, ಸಿದ್ಧಾಂತಗಳನ್ನು ಬಣ್ಣ ಬಣ್ಣದ ಪುಷ್ಪಗಳಿಂದ ಯುವ ಸಮೂಹ ಹಾಗೂ ಸಮಾಜಕ್ಕೆ ತಿಳಿಸಲು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘಗಳು ಮುಂದಾಗಿವೆ. 19 ಅಡಿ ಉದ್ದದ ವಿವೇಕಾನಂದರ ಪುಷ್ಪ ಪ್ರತಿಮೆ ನಿರ್ಮಿಸಲಿದೆ.
ವಿವೇಕಾನಂದರ ಜೀವನ ಕುರಿತಂತೆ ಸಂಪೂರ್ಣ ಇತಿಹಾಸವನ್ನು ಪ್ರದರ್ಶನದಲ್ಲಿ ಅಳವಡಿಸಲಾಗುವುದು. ಅವರ ಜೀವನ ಕುರಿತ ಹೆಚ್ಚಿನ ಮಾಹಿತಿಯನ್ನು ರಾಮಕೃಷ್ಣ ಮಿಷನ್‌ನಿಂದ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ವಿವೇಕಾನಂದರ ಬಾಲ್ಯದ ಜೀವನ, ಶಿಕ್ಷಣ ಮತ್ತು ಧಾರ್ಮಿಕ ಸೇವೆ ಕುರಿತಂತೆ ಮಾಹಿತಿ ಪಡೆದು ಮಿಷನ್‌ನ ಸಲಹೆಯಂತೆ ಪ್ರದರ್ಶನ ಆಯೋಜಿಸಲಾಗುವುದು.
ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸ್ಮಾರಕ ಶಿಲಾ ಬಂಡೆಯ ಮೇಲೆ ಸ್ವಾಮಿ ವಿವೇಕಾನಂದರು ನಿಂತಿರುವ ದೃಶ್ಯ ಅತ್ಯಂತ ಆಕರ್ಷಣೀಯವಾಗಿದ್ದು, ಅದೇ ಮಾದರಿಯಲ್ಲಿ ಲಪುಷ್ಪ ಪ್ರದರ್ಶನದಲ್ಲಿ ಈ ಸ್ಮಾರಕವನ್ನು ನಿರ್ಮಿಸಲು ಆಯೋಜಕರು ನಿರ್ಧರಿಸಿದ್ದಾರೆ. ಇದರೊಂದಿಗೆ ಮಕ್ಕಳಿಗಾಗಿ ಸಂಗೀತ ಪರಿಕರ, ಪಕ್ಷಿಗಳ ಆಕರ್ಷಣೆ ಇತ್ಯಾದಿಗಳು ಗಮನ ಸೆಳೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


