ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.
ಇಲ್ಲಿನ ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಮೃತಪಟ್ಟ ದುರ್ದೈವಿ. ಸಾಲದಿಂದ ಕೊಂಡುಕೊಂಡಿದ್ದ ಜೆಸಿಬಿ ವಿಚಾರಕ್ಕೆ ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್ 14ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಗ್ರಾಮದಲ್ಲಿರುವ ಮಠಕ್ಕೆ ತೆರಳುತ್ತೇನೆಂದು ಮನೆಯವರಿಗೆ ಹೇಳಿ ಬಂದಿದ್ದ ಶಿವಲಿಂಗಪ್ಪ ಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


