ಮಂಗಳೂರು ಗಲಭೆ ಪ್ರಕರಣ: ಮ್ಯಾಜಿಸ್ಟ್ರೀಯಲ್ ತನಿಖೆಗೆ ಸರ್ಕಾರ ಆದೇಶ
ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ವಹಿಸಿ ಆದೇಶಿಸಿದೆ.

ಬೆಂಗಳೂರು:ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ವಹಿಸಿ ಆದೇಶಿಸಿದೆ.
ಡಿಸೆಂಬರ್ 19 ರಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ನಡೆದ ಪ್ರತಿಭ ಟನೆ ಮತ್ತು ಗಲಭೆ ವೇಳೆ ನಡೆದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ಆದೇಶಿಸಿದೆ.
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯಾಕಾರಿ ದಂಡಾಧಿಕಾರಿಯಾಗಿ ನೇಮಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


