ಕೊಳ್ಳೇಗಾಲ: ಟಾಟಾ ಏಸ್ ಪಲ್ಟಿ; 12 ಮಂದಿಗೆ ಗಾಯ, 6 ಜನರ ಸ್ಥಿತಿ ಗಂಭೀರ
ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ನರೀಪುರದಿಂದ 14 ಮಂದಿ ಕೂಲಿ ಕಾರ್ಮಿಕರನ್ನು ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರನ್ನು ಟಾಟಾ ಏಸ್ ವಾಹನದಲ್ಲಿ ಕರೆತರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಕೊಳ್ಳೇಗಾಲ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಿತಿ ಗಂಭೀರಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. 12 ಮಂದಿಗೆ ಗಾಯಗೊಂಡಿದ್ದು, ಅದರಲ್ಲಿ 6 ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸಾಗಿಸಲಾಗಿದೆ.ಉಳಿದ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕ ಆರ್. ನರೇಂದ್ರ ಭೇಟಿ ನೀಡಿದ್ದಾರೆ.
ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:- ಗೂಳಿಪುರ ನಂದೀಶ ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


