ರಾಜ್ಯ

ಬೆಂಗಳೂರು: ಪಾರ್ಕ್, ಆಟದ ಮೈದಾನಗಳಲ್ಲಿ ಹೊಸ ವರ್ಷದ ಪಾರ್ಟಿಗೆ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಯಾವುದೇ ಉದ್ಯಾನವನ ಮತ್ತು ಆಟದ ಮೈದಾನಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಬಿಬಿಎಂಪಿ ನಿಷೇಧ ಹೇರಿದೆ.

ಬೆಂಗಳೂರು: ಪಾರ್ಕ್, ಆಟದ ಮೈದಾನಗಳಲ್ಲಿ ಹೊಸ ವರ್ಷದ ಪಾರ್ಟಿಗೆ ನಿಷೇಧ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಯಾವುದೇ ಉದ್ಯಾನವನ ಮತ್ತು ಆಟದ ಮೈದಾನಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಬಿಬಿಎಂಪಿ ನಿಷೇಧ ಹೇರಿದೆ.

ಪಾರ್ಕ್ ಗಳಲ್ಲಿ ಸಂಭ್ರಮಾಚರಣೆ  ಮಾಡುವಾಗ ಮದ್ಯ ಸೇವಿಸುವುದಕ್ಕೆ ಅವಕಾಶ ನೀಡುವುದಿಲ್ಲ, ರಾತ್ರಿ 9 ಗಂಟೆಗೆ ಪಾರ್ಕ್ ಕ್ಲೋಸ್ ಮಾಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ  ಬಿ.ಎಚ್ ಅನಿಲ್ ಕುಮಾರ್ ಹೇಳಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಕುಡಿದು ಮದ್ಯದ ಬಾಟಲಿಗಳನ್ನು ಪಾರ್ಕ್ ಮತ್ತು ಆಟದ ಮೈದಾನಗಳಲ್ಲಿ ಎಸೆಯುತ್ತಾರೆ. ಇಂತಹ ಘಟನೆಗಳು ಹಿಂದಿನ ವರ್ಷಗಳಲ್ಲಿ  ಪಾರ್ಟಿ ವೇಳೆ ನಡೆದಿವೆ, ಆದರೆ ಆಗ ಇಂತಹ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ, ಹೀಗಾಗಿ ಈ ವರ್ಷ ಅದಕ್ಕಾಗಿ ಹೊಸ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಒಂದು ವೇಳೆ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಪಾರ್ಕ್ ಅಥವಾ ಆಟದ ಮೈದಾನದಲ್ಲಿ ಇಂಥ ಚಟುವಟಿಕೆಗಳು ನಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.