ಜನವರಿ 2ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಜನವರಿ ೨ ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ ೨ ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ನಂತರ ಪ್ರಧಾನಿ ಮೋದಿ ಶ್ರಿ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ನಮನ ಸಲ್ಲಿಸುವ ಕಾರ್ಯಕ್ರಮವಿದೆ. ಜನವರಿ ೩ ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಭಾರತೀಯ ಕೃಷಿ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಜಿಗಣಿಯಲ್ಲಿರುವ ಯೋಗ ವಿಶ್ವಾವಿದ್ಯಾಲಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜನವರಿ ೩ ರಂದು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎರಡು ದಿನಗಳ ಹಿಂದೆ ತುಮಕೂರಿಗೆ ತೆರಳಿ ಪ್ರಧಾನಿ ಕಾರ್ಯಕ್ರಮ ನಡೆಯುವ ಸ್ಥಳಗಳ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಜ.೩ರಂದು ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ಆಯೋಜಿಸಲಾಗಿದ್ದು, ಕೃಷಿ ಸಮ್ಮಾನ್ ಯೋಜನೆಯ ಎರಡನೇ ಕಂತನ್ನು ತುಮಕೂರಿನಿಂದಲೇ ದೇಶಾದ್ಯಂತ ಚಾಲನೆ ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು.
ತುಮಕೂರು ಪ್ರಗತಿಪರ ರೈತರ ಜಿಲ್ಲೆಯಾಗಿದ್ದು ಕೃಷಿಕರ ಆದಾಯವನ್ನು ದ್ವಿಗುಣಗೊಳಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ತುಮಕೂರಿನಲ್ಲಿಯೇ ಕಾರ್ಯಕ್ರಮ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀರ್ಮಾನ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


