ರಾಜ್ಯ

ಶೃಂಗೇರಿ ದೇವಾಲಯಕ್ಕೆ ಸಿಜೆಐ ಅರವಿಂದ್ ಬೋಬ್ಡೆ ಭೇಟಿ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಬೋಬ್ಡೆ ಡಿ.26 ರಂದು ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ದೇವಾಲಯಕ್ಕೆ ಸಿಜೆಐ ಅರವಿಂದ್ ಬೋಬ್ಡೆ ಭೇಟಿ
ಶೃಂಗೇರಿ ದೇವಾಲಯಕ್ಕೆ ಸಿಜೆಐ ಅರವಿಂದ್ ಬೋಬ್ಡೆ ಭೇಟಿ
Published On :

ಶೃಂಗೇರಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಬೋಬ್ಡೆ ಡಿ.26 ರಂದು ಶೃಂಗೇರಿಗೆ ಭೇಟಿ ನೀಡಿದ್ದಾರೆ. 

ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಸಿಜೆಐ ಕ್ಷೇತ್ರದ ದೇವಿ ಶಾರದಾಂಬೆ ಹಾಗೂ ಉಭಯ ಜಗದ್ಗುರುಗಳ ದರ್ಶನ ಪಡೆದಿದ್ದಾರೆ. ಡಿ.26 ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಲಿರುವ ಬೋಬ್ಡೆ, ಶುಕ್ರವಾರ ಬೆಳಗ್ಗೆ 8:30ಕ್ಕೆ ಮಂಗಳೂರಿನ ಮೂಲಕ ದೆಹಲಿಗೆ ತೆರಳಲಿದ್ದಾರೆ. 

ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಗೌರಿ ಶಂಕರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಸ್ ಪಿ ಹರೀಶ್ ಪಾಂಡೆ, ಕರ್ನಾಟಕ ಹೈ ಕೋರ್ಟಿನ ರಿಜಿಸ್ಟ್ರಾರ್, ಚಿಕ್ಕಮಗಳೂರು ಹಾಗೂ ಶೃಂಗೇರಿ ನ್ಯಾಯಾಲಯದ ನ್ಯಾಯಮೂರ್ತಿಗಳು ಅರವಿಂದ್ ಬೋಬ್ಡೆ ಅವರ ಜೊತೆಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.