ರಜೆಗೆ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆಗೆ ಶರಣು!
ರಜೆಗೆ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗದಗ: ರಜೆಗೆ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹಾಂತೇಶ್ ಮೇಟಿ(25 ವರ್ಷ|) ಆತ್ಮಹತ್ಯೆಗೆ ಶರಣಾದ ಸೈನಿಕನಾಗಿದ್ದು, 2 ತಿಂಗಳು ರಜೆಗೆಂದು ಊರಿಗೆ ಬಂದಿದ್ದ ಮಹಾಂತೇಶ್ ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ವಾಪಾಸ್ ಹೋಗುವ ಮುನ್ನವೇ ನೇಣಿಗೆ ಶರಣಾಗಿದ್ದಾರೆ, ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆಳ್ಳೆರಿನಲ್ಲಿ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮಹಾಂತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಮಾಹಾಂತೇಶ್ ಅವರು 2005ರಲ್ಲಿ ಭಾರತೀಯ ಸೇನೆಗೆ ಭರ್ತಿಯಾಗಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಿಕ್ಕಿಂನ 228 ಬೆಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಬಾರಿ ತಮ್ಮ ಮದುವೆ ಕಾರ್ಯಕ್ರಮದ ನಿಮಿತ್ತ ಎರಡು ತಿಂಗಳು ರಜೆ ಹಾಕಿಕೊಂಡು ಮಹಾಂತೇಶ್ ಊರಿಗೆ ಬಂದಿದ್ದರು. ಕಳೆದ 15 ದಿನಗಳ ಹಿಂದೆಯಷ್ಟೇ ಇವರ ಮದುವೆ ನಿಶ್ಚಿತಾರ್ಥ ಕೂಡಾ ಮಾಡಲಾಗಿತ್ತು. ಆದರೆ ಬುಧವಾರ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಮಹಾಂತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏಕಾಏಕಿ ಜಮೀನಿನಲ್ಲಿ ಮಹಾಂತೇಶ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಇತ್ತ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


