ಮಂಗಳೂರು ಹಿಂಸಾಚಾರ: ಪೊಲೀಸರ ವಾಟ್ಸಾಪ್ ಗ್ರೂಪ್'ಗೆ 30,000 ವಿಡಿಯೋ ಕಳುಹಿಸಿದ ಜನತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಲೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ವಾಟ್ಸಾಪ್ ಗ್ರೂಪ್'ಗೆ 30 ಸಾವಿರಕ್ಕೂ ಹೆಚ್ಚು ವಿಡಿಯೋಗಳು ಬಂದಿದ್ದು, ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಲೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ವಾಟ್ಸಾಪ್ ಗ್ರೂಪ್'ಗೆ 30 ಸಾವಿರಕ್ಕೂ ಹೆಚ್ಚು ವಿಡಿಯೋಗಳು ಬಂದಿದ್ದು, ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದೆ.
ಪ್ರತಿಭಟನೆ ತೀವ್ರ ಸ್ವಪೂರ ಪಡೆದಿರುವುದರಿಂದ ಪೊಲೀಸರು ಗೋಲಿಬಾರ್ ನಡೆಸಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.
ಇದೇ ವೇಳೆ ಗಲಭೆಗೆ ಕಾರಣರಾದವರನ್ನು ಗುರುತಿಸುವ ಉದ್ದೇಶದಿಂದ ಪೊಲೀಸರು ಸಾರ್ವಜನಿಕರ ಬಳಿ ವಿಡಿಯೋಗಳು ಇದ್ದರೇ ಕಳುಹಿಸಿ ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸಾರ್ವಜನಿಕರಿಂದ ಅದ್ಭುತ ಸ್ಪಂದನೆ ವ್ಯಕ್ತವಾಗಿದೆ.
ಮಂಗಲೂರು ಪೊಲೀಸ್ ಕಮಿಷನರ್ ಡಾ.ಹರ್ಷ ಅವರು ಕೆಲ ತಿಂಗಳ ಹಿಂದೆ ಪೊಲೀಸ್ ಹಾಗೂ ನಾಗರೀಕರ ಸಹಭಾಗಿತ್ವದಲ್ಲಿ ಹೊಸ ಬೀಟ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಈ ವ್ಯವಸ್ಥೆಯಲ್ಲಿ ಕಮಿಷನರೇಟ್ ವ್ಯಾಪ್ತಿಯ 14 ಪೊಲೀಸ್ ಠಾಣೆಯ ಪ್ರತಿ ಬೀಟ್ ವ್ಯಾಪ್ತಿಯಲ್ಲಿ ನಾಗರಿಕರ ಸಹಭಾಗಿತ್ವವನ್ನು ಮಾಡಲಾಗಿತ್ತು. ಅದರಂತೆ ಒಟ್ಟು 750 ಬೀಟ್ ಗಳಲ್ಲಿ 52 ಸಾವಿರ ಮಂದಿ ನಾಗರೀಕರನ್ನು ಬೀಟ್ ವಾಟ್ಸಾಪ್ ಗ್ರೂಪ್'ಗೆ ಸೇರಿಸಲಾಗಿತ್ತು. ಇದು ಗಲಭೆಕೋರರ ಪತ್ತೆಗೆ ನೆರವಿಗೆ ಬಂದಿದೆ.
ಸುಮಾರು 30ಸಾವಿರಕ್ಕೂ ಅಧಿಕ ವಿಡಿಯೋಗಳನ್ನು ನಾಗರೀಕರು ಈ ಗ್ರೂಪ್ ಮೂಲಕ ಕಳುಹಿಸಿದ್ದಾರೆ. ನಾಗರಿಕರು ಸಲ್ಲಿಸಿದ ವಿಡಿಯೋಗಳನ್ನು ಸೈಬರ್ ಪೊಲೀಸರು ಪರಿಶೀಲಿಸುತ್ತಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


