ರಾಜ್ಯ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಡಿಸಿಎಂ ಕಾರಜೋಳ

ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಡಿಸಿಎಂ ಕಾರಜೋಳ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
Published On :

ವಿಜಯಪುರ: ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ನೀರಿನ‌ ಮಟ್ಟವನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಆಲಮಟ್ಟಿ ಅಣೆಕಟ್ಟೆಯಲ್ಲಿ 107ಟಿಎಂಸಿ ಹಾಗೂ ನಾರಾಯಣ ಪುರ ಜಲಾಶಯದಲ್ಲಿ 30 ಟಿಎಂಸಿ‌ ನೀರು ಸಂಗ್ರಹವಾಗಿದೆ. ಈ ನೀರನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು.

ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ವಾರ ಬಂದಿಯಂತೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ಉದ್ದೇಶಕ್ಕೆ ನೀರು ಬಿಡುಗಡೆ ಮಾಡಬೇಕು. ನೀರು ಪೋಲಾಗಬಾರದು ಮತ್ತು ದುರುಪಯೋಗ ವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಿನಿಂದಲೇ ಎಚ್ಚರಿಕೆ ವಹಿಸಿದರೆ ಬೇಸಿಗೆಯಲ್ಲಿ ನೀರಿನ ಅಭಾವವನ್ನು ನಿಭಾಯಿಸಬಹುದು. ಈ ನಿಟ್ಟಿನಲ್ಲಿ‌ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.