ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕುಂದಾಪುರ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಡಿ.28 ರಂದು ಕುಂದಾಪುರದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನದಲ್ಲಿ ಮಾತನಾಡಿರುವ ಯಡಿಯೂರಪ್ಪ ಬೆಂಗಳೂರಿನಲ್ಲಿ ಬ್ರಾಹ್ಮಣ ಮಹಾಸಭಾ ವತಿಯಿಂದ ನಿರ್ಮಾಣವಾಗಲಿರುವ ಸಭಾಭವನಕ್ಕೆ ಮೊದಲ ಕಂತಿನಲ್ಲಿ 5 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಮಹಾ ಸಮ್ಮೇಳನದಲ್ಲಿ ಪ್ರಾಸ್ತಾಪಿಸಿರುವ ಬೇಡಿಕೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಹಿಂದೂ ಧರ್ಮದಲ್ಲಿ ಬ್ರಾಹ್ಮಣರು ಧಾರ್ಮಿಕ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರಂತಹ ಗುರು ಶ್ರೇಷ್ಠರ ತತ್ವದ ಆದರ್ಶದಲ್ಲಿ ನಡೆದುಬಂದ ವೇದ ಉಪನಿಷತ್ತುಗಳನ್ನು ಬೋಧಿಸುತ್ತಾ ಸಮಾಜದ ಎಲ್ಲ ವರ್ಗದವರಿಗೆ ಧಾರ್ಮಿಕತೆಯ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಸನಾತನ ಹಿಂದೂ ಧರ್ಮದ ರಕ್ಷ ಣೆಯಲ್ಲಿ ಬ್ರಾಹ್ಮಣ ಸಮಾಜ ಮಹತ್ವದ ಪಾತ್ರ ವಹಿಸಿದೆ. ಹಿಂದೂ ಸಮಾಜವನ್ನು ಜಾಗೃತಗೊಳಿಸುವ ಕೀರ್ತಿ ಬ್ರಾಹ್ಮಣ ಸಮಾಜಕ್ಕೆ ಸಲ್ಲುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


