ರಾಜ್ಯ

ಶೌಚಾಲಯದಲ್ಲಿ ಹಸುಗೂಸನ್ನು ಬಿಟ್ಟು ಹೋದ ಮಹಾತಾಯಿ

ನವಜಾತ ಹೆಣ್ಣು ಶಿಶುವನ್ನು ಶಾಲೆಯೊಂದರ ಶೌಚಾಲಯದಲ್ಲಿಯೇ ಬಿಟ್ಟು ಹೋಗಿರುವ ಅಮಾನವೀಯ ಘಟನೆಯೊಂದು ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ನಡೆದಿದೆ.

ಶೌಚಾಲಯದಲ್ಲಿ ಹಸುಗೂಸನ್ನು ಬಿಟ್ಟು ಹೋದ ಮಹಾತಾಯಿ
ಸಂಗ್ರಹ ಚಿತ್ರ
Published On :

ಬೆಳಗಾವಿ: ನವಜಾತ ಹೆಣ್ಣು ಶಿಶುವನ್ನು ಶಾಲೆಯೊಂದರ ಶೌಚಾಲಯದಲ್ಲಿಯೇ ಬಿಟ್ಟು ಹೋಗಿರುವ ಅಮಾನವೀಯ ಘಟನೆಯೊಂದು ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ನಡೆದಿದೆ. 

ಶನಿವಾರ ಮಧ್ಯಾಹ್ನ ಶಾಲೆಗೆ ಬಂದಿರುವ ಶಿಶುವಿನ ಪೋಷಕರು ಮಗುವನ್ನು ಶೌಚಾಲಯದಲ್ಲಿಯೇ ಬಿಟ್ಟು ಹೋಗಿದ್ದಾರೆ. ಮಗು ಅಳುವುದನ್ನು ಕೇಳಿಸಿಕೊಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಮಗು ಪತ್ತೆಯಾಗಿದೆ. ಕೂಡಲೇ ಮಗುವನ್ನು ರಕ್ಷಣೆ ಮಾಡಿ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಹೆಣ್ಣು ಮಗು ಆದ ಕಾರಣ ಬಿಟ್ಟು ಹೋಗಲಾಗಿದೆ ಎಂದು ಹೇಳಲಾಗುತ್ತಿದ್ದು, ಶಿಶುವನ್ನು ಬಿಟ್ಟು ಹೋದ ತಾಯಿಗೆ ಇದೀಗ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. 

ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪೋಷಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.