ಮಂಗಳೂರು ಗೋಲಿಬಾರ್ ಘಟನೆ: ಮ್ಯಾಜಿಸ್ಟೇಟ್ ತನಿಖೆ ಆರಂಭ
ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸೋಮವಾರ ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ.

ಮಂಗಳೂರು: ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸೋಮವಾರ ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ.
ಮಂಗಳೂರು ಹಿಂಸಾಚಾರದ ತನಿಖೆಯನ್ನು ರಾಜ್ಯ ಸರಕಾರ ಮ್ಯಾಜಿಸ್ಟೇಟ್ ತನಿಖೆಗೆ ನೀಡಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಅಲ್ಲದೆ ಮೂರು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅದರಂತೆ ಇಂದು ಮಂಗಳೂರಿಗೆ ಆಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅವರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಜಗದೀಶ್ ಅವರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


