ರೆಡ್ ಎಫ್ ಎಂ' ನಮ್ಮ ಬೆಂಗಳೂರು ಹಾಡು ಹಿಂದಿಮಯ' ಕನ್ನಡಿಗರ ಆಕ್ರೋಶ
ರೆಡ್ ಎಫ್ ಎಂ ರೇಡಿಯೊ ನಿರ್ಮಾಣ ಮಾಡಿರುವ 'ನಮ್ಮೂರು ನಮ್ಮೂರು ಇದುವೇ ನಮ್ಮ ಬೆಂಗಳೂರು' ವಿಡಿಯೋ ಹಾಡು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನ ಸಾಹಿತ್ಯ ಸಂಪೂರ್ಣ ಹಿಂದಿಯಲ್ಲಿರುವುದು ಕನ್ನಡಿಗರಲ್ಲಿ ಆಕ್ರೋಶ ಮೂಡಿಸಿದೆ.

ಬೆಂಗಳೂರು: ರೆಡ್ ಎಫ್ ಎಂ ರೇಡಿಯೊ ನಿರ್ಮಾಣ ಮಾಡಿರುವ 'ನಮ್ಮೂರು ನಮ್ಮೂರು ಇದುವೇ ನಮ್ಮ ಬೆಂಗಳೂರು' ವಿಡಿಯೋ ಹಾಡು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನ ಸಾಹಿತ್ಯ ಸಂಪೂರ್ಣ ಹಿಂದಿಯಲ್ಲಿರುವುದು ಕನ್ನಡಿಗರಲ್ಲಿ ಆಕ್ರೋಶ ಮೂಡಿಸಿದೆ.
ಬೆಂಗಳೂರು ಕರ್ನಾಟಕದ ರಾಜಧಾನಿಯಾಗಿದ್ದು, ಕನ್ನಡವೇ ಆಡಳಿತ ಭಾಷೆಯಾಗಿದ್ದರೂ ಸಾಹಿತ್ಯವನ್ನು ಹಿಂದಿಯಲ್ಲಿ ಯಾಕೆ ರಚಿಸಲಾಗಿದೆ?ಉತ್ತರ ಭಾರತದ ಭಾಷೆ ಹಾಗೂ ಸಂಸ್ಕೃತಿಯನ್ನು ಮಿಳಿತ ಮಾಡಿರುವುದು ಏಕೆ ಎಂದು ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಮ್ಮೂರು ನಮ್ಮೂರು ಇದುವೇ ನಮ್ಮ ಬೆಂಗಳೂರು ಎನ್ನುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಮಾತಿನೊಂದಿಗೆ ಆರಂಭವಾಗುವ ಈ ಹಾಡಿನಲ್ಲಿ ನಟ ರಮೇಶ್ ಅರವಿಂದ್ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ, ನಟಿ ಕೃಷಿ ತಪಂದಾ, ವಸ್ತ್ರ ವಿನ್ಯಾಸಕಾರ ಪ್ರಸಾದ್ ಬಿದ್ದಪ್ಪ ಅವರನ್ನು ತೋರಿಸಲಾಗಿದೆ.
2 ನಿಮಿಷ 12 ಸೆಕೆಂಡ್ ಗಳ ಈ ವಿಡಿಯೋ ಸಾಂಗ್ ನ್ನು ಫೆಬ್ರವರಿ 1 ರಂದು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಈವರೆಗೂ 3 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದು, 65 ಜನರು ಲೈಕ್ ಮಾಡಿದ್ದರು, 658 ಜನರು ಡಿಸ್ ಲೈಕ್ ಮಾಡಿದ್ದಾರೆ. ಬಹುತೇಕ ಮಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


