ಬೆಂಗಳೂರು: ಬಿಷಪ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ, ಸಿಸಿಬಿಗೆ ವರ್ಗಾವಣೆ
ಶಿವಾಜಿನಗರದ ಬಿಷಪ್ ಪಿ. ಕೆ. ಸ್ಯಾಮುಯೆಲ್ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.

Published On :
ಬೆಂಗಳೂರು: ಶಿವಾಜಿನಗರದ ಬಿಷಪ್ ಪಿ. ಕೆ. ಸ್ಯಾಮುಯೆಲ್ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.
ಸಂತ್ರಸ್ತೆ ಗೃಹ ಸಚಿವ ಎಂ. ಬಿ. ಪಾಟೀಲ್ ಅವರಲ್ಲಿ ಮನವಿ ಮಾಡಿದ ನಂತರ ತನಿಖೆಗಾಗಿ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
2013ರಲ್ಲಿ ಸಂತ್ರಸ್ತ ಯುವತಿ ವಿನೋದ್ ದಾಸನ್ ಎಂಬವರ ಮೇಲೆ ಕೊತ್ತನೂರು ಠಾಣೆಯಲ್ಲಿ ದೌರ್ಜನ್ಯ ಕಾಯ್ದೆ ದಾಖಲಿಸಿದ್ದರು. ವಿನೋದ್ ವರ್ಷದ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದು, ತಮ್ಮ ಪತಿಯಿಂದ ವಿಚ್ಚೇದನ ಪಡೆಯುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಆಕೆ ದೂರು ದಾಖಲಿಸಿದ್ದರು.
ಜನವರಿ 21 ರಂದು ಆಕೆಯ ಮನೆಗೆ ತೆರಳಿದ ವಿನೋದ್ ದೂರು ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾನೆ.ನಂತರ ಟ್ರಿನಿಟಿ ಚರ್ಚ್ ನ ಬಿಷಪ್ ಅವರ ಬಳಿಗೆ ಕರೆದುಕೊಂಡು ಹೋದಾಗ ಬಿಷಪ್ ಸ್ಯಾಮುಯೆಲ್ 1 ಕೋಟಿ ರೂ. ಹಾಗೂ ಉದ್ಯೋಗದ ಆಮಿಷವೊಡ್ಡಿ ಕೇಸ್ ಹಿಂಪಡೆಯುವಂತೆ ಒತ್ತಾಯ ಹಾಕಿದ್ದಾರೆ. ಆದರೆ, ಇದಕ್ಕೆ ಒಪ್ಪದಿದ್ದಾಗ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಾಗಿ ಆಕೆ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bengaluruಪ್ರಕರಣಲೈಂಗಿಕ ಕಿರುಕುಳSexual harassmentಸಿಸಿಬಿCentral Crime BranchCase ಬೆಂಗಳೂರುBishop P K Samuelಬಿಷಪ್ ಪಿಕೆ ಸ್ಯಾಮುಯೆಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


