ರಾಜ್ಯ

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!

ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!
ಸಂಗ್ರಹ ಚಿತ್ರ
Published On :
ಬಾಗಲಕೋಟೆ: ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. 
ಜನವರಿ 23ರಂದ ಈ ಪ್ರಕರಣ ನಡೆದಿದ್ದು ಶಾಲೆಯ ಶಿಕ್ಷಕರು 9 ವರ್ಷದ ವಿದ್ಯಾರ್ಥಿ ಬಸವರಾಜು ಪಿ ಎಂಬಾತನಿಗೆ ಶಾಲೆಯ ಸಮಯದಲ್ಲಿ ಶೌಚಾಲಯವನ್ನು ಶುಚಿಗೊಳಿಸುವಂತೆ ಹೇಳಿದ್ದರು. ಅಂತೆ ಬಸವರಾಜು ಪಂಪ್ ಅನ್ನು ಆಫ್ ಮಾಡುವಾಗ ಕರೆಂಟ್ ಶಾಕ್ ಹೊಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಬಸವರಾಜನನ್ನು ಪರೀಕ್ಷಿಸಿದ ವೈದ್ಯರು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಶಿಕ್ಷಕರಿಗೆ ತಿಳಿಸಿದ್ದು ಆ ಬಳಿಕ ಶಿಕ್ಷಕರು ಈ ವಿಷಯವನ್ನು ಬಾಲಕನ ಪೋಷಕರಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ಪೋಷಕರು ಬಿಇಒ ಅಧಿಕಾರಿಗೆ ದೂರು ನೀಡಿದ್ದು ಈ ದೂರಿನನ್ವಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.