ಮೈಸೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, 3 ಪಾದ್ರಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲಿ ಮಂಗಳೂರು ಮೂಲದ ಮೂವರು ಪಾದ್ರಿಗಳ ವಿರುದ್ಧ ಮೈಸೂರು ನರಸಿಂಹ ರಾಜ ಠಾಣೆ ಪೋಲೀಸರು ಪ್ರಥಮ ಮಾಹಿತಿ ವರದಿ (ಎಫ್ ಐಆರ್)....

Published On :
ಮೈಸೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲಿ ಮಂಗಳೂರು ಮೂಲದ ಮೂವರು ಪಾದ್ರಿಗಳ ವಿರುದ್ಧ ಮೈಸೂರು ನರಸಿಂಹ ರಾಜ ಠಾಣೆ ಪೋಲೀಸರು ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಿಕೊಂಡಿದ್ದಾರೆ.ಎಸ್ಸಿ / ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ಹೆಸರಿನಲ್ಲಿ ನಿಂದನೆ ಹಾಗೂ ಅಪಹರಣ ಪ್ರಕರಣದೊಡನೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಅವರ ವಿರುದ್ಧ ದೂರು ದಾಖಲಾಗಿದೆ.
ಮೈಸೂರು ಮೂಲದ ಸಂತ್ರಸ್ಥ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ನಿರ್ದೇಶನದ ಅನುಸಾರ ಈ ಕ್ರಮ ತೆಗೆದುಕೊಳ್ಲಲಾಗಿದೆ.ಈ ಸಂಬಂಧ ಸ್ಥಳೀಯ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆರೋಪಿಗಳು ಮಂಗಳೂರು ಬಲ್ಮಠದ ನಿವಾಸಿಗಳಾಗಿದ್ದು ಸೆಬಾಸ್ಟಿಯನ್, ಜೋಶುವಾ ಅಮನ್ ಹಾಗೂ ಬೆನ್ನೆಟ್ ಅಮನ್ ಎಂದು ಗುರುತಿಸಲಾಗಿದೆ.
16 ವರ್ಷದ ಬಾಲಕಿಯ ತಾಯಿಯ ದೂರಿನಂತೆ ಮಂಗಳೂರಿನ ನರ್ಸಿಂಗ್ ಹೋಮ್ನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದ ಈ ಮೂವರು ಕಳೆದ ವರ್ಷ ನವೆಂಬರ್ ನಲ್ಲಿ ಆಕೆಯನ್ನು ತಮ್ಮೊಡನೆ ಕರೆದೊಯ್ದಿದ್ದಾರೆ.ಮನೆ ನಿರ್ಮಾಣದಲ್ಲಿ ನಿರತವಾಗಿದ್ದ ಬಾಲಕಿಯ ತಾಯಿಗೆ ಆ ಮೂವರೂ 1 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ.
ಆದರೆ ಮಂಗಳೂರಿಗೆ ಕರೆದೊಯ್ದ ಬಳಿಕ ಆಕೆಯಿಂದ ತಮ್ಮ ಮನೆಗೆಲಸಗಳನ್ನು ಮಾಡಿಸಿಕೊಂಡಿದ್ದಲ್ಲದೆ ಡಿಸೆಂಬರ್ ಮಧ್ಯದ ಅವಧಿಯಿಂದಲೂ ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾರೆ.ಅವರು ಬಾಲಕಿಯನ್ನು ಗೃಹ ಬಂಧನ'ದಲ್ಲಿ ಇಟ್ಟುಕೊಂಡಿದ್ದರು ಮತ್ತು ಯಾರಿಗೂ ಈ ಕೃತ್ಯದ ಬಗ್ಗೆ ಮಾಹಿತಿ ನೀಡಬಾರದೆಂದು ಬೆದರಿಕೆ ಹಾಕಿದ್ದರು.ಇಷ್ಟೇ ಅಲ್ಲದೆ ಜಾತಿ ಹೆಸರಿನಲ್ಲಿ ಅವಳಿಗೆ ನಿಂದನೆಯನ್ನೂ ಮಾಡಿದ್ದಾರೆ ಎಂದು ಆಕೆ ದೂರಿನಲ್ಲಿ ಹೇಳಿದ್ದಾರೆ.
ಸಧ್ಯ ಪೋಲೀಸರು ಆರೋಪಿಗಳ ಪತ್ತೆಗೆ ಕ್ರಮ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


