ಹಲ್ಲೆ ಪ್ರಕರಣ: ಶಾಸಕ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಸೋಮವಾರ ಬಿಡುಗಡೆಯಾಗಿದ್ದಾರೆ.

Published On :
ಬೆಂಗಳೂರು: ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಸೋಮವಾರ ಬಿಡುಗಡೆಯಾಗಿದ್ದಾರೆ.
ಸೋಮವಾರ ರಾತ್ರಿ 7.30ರ ವೇಳೆಗೆ ಬೆಂಗಳೂರು ಶೇಷಾಂದ್ರಿಪುರಂ ನಲ್ಲಿರುವ ಅಪೋಲೋ ಆಸ್ಪತ್ರೆಯಿಂದ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದಾರೆ.ಈ ವೇಳೆ ಪತ್ನಿ, ಮಕ್ಕಳಲ್ಲದೆ ಹಲವಾರು ಬೆಂಬಲಿಗರು ಆನಂದ್ ಸಿಂಗ್ ಅವರ ಜತೆಯಲ್ಲಿದ್ದರು.
ಜನವರಿ 19ರಂದು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದ ಸಮಯ ಕಂಪ್ಲಿ ಶಾಸಕ ಗಣೇಶ್ ಅವರಿಂದ ಆನಂದ್ ಸಿಂಗ್ ಹಲ್ಲೆಗೀಡಾಗಿದ್ದರು. ಗಣೇಶ್ ಆನಂದ್ ಸಿಂಗ್ ಅವರ ತಲೆ, ಕಣ್ಣು, ಎದೆ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಕುಟುಂಬ ಪೋಲೀಸರಿಗೆ ದೂರಿತ್ತಿತ್ತು. ಅಲ್ಲದೆ ಕಾಂಗ್ರೆಸ್ ಪಕ್ಷ ಸಹ ಕಂಪ್ಲಿ ಗಣೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.
ಸಧ್ಯ ಪೋಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದು ಗಣೇಶ್ ಅವರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಶಾಸಕ ಗಣೇಶ್ ಮಾತ್ರ ಇನ್ನೂ ಎಲ್ಲಿದ್ದಾರೆನ್ನುವುದು ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Anand singhಆನಂದ್ ಸಿಂಗ್Eagleton Resortಈಗಲ್ಟನ್ ರೆಸಾರ್ಟ್Kampli Ganeshಕಂಪ್ಲಿ ಗಣೇಶ್Anand Singh dischargedಆನಂದ್ ಸಿಂಗ್ ಡಿಸ್ಚಾರ್ಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


