ಸಿದ್ದರಾಮಯ್ಯ ಸರ್ಕಾರ ತಿರಸ್ಕರಿಸಿದ್ದ ಮಿನಿ-ಹೈಡಲ್ ಯೋಜನೆಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಗ್ರೀನ್ ಸಿಗ್ನಲ್!
ಕಾವೇರಿ ನದಿಗೆ ಅಡ್ಡಲಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿರಸ್ಕರಿಸಿದ್ದ ಬಸವೇಶ್ವರ ಸಣ್ಣ ...

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿರಸ್ಕರಿಸಿದ್ದ ಬಸವೇಶ್ವರ ಸಣ್ಣ ಹೈಡಲ್ ಯೋಜನೆಯನ್ನು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 24.75 ಮೆಗಾ ವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗಲಿದೆ.
ಈ ಯೋಜನೆ ಈಗಿರುವ 24.75 ಮೆಗಾ ವ್ಯಾಟ್ ಸಾಮರ್ಥ್ಯದ ರಂಗನಾಥ ಸ್ವಾಮಿ ಮಿನಿ ಹೈಡಲ್ ಯೋಜನೆಯ ಪಕ್ಕದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಶಿವನಸಮುದ್ರದಲ್ಲಿ ತಲೆಯೆತ್ತಲಿದ್ದು ಒಟ್ಟಾಗಿ 49.5 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವನ್ನು ಹೊಂದಲಿದೆ.
ಯೋಜನೆಯಲ್ಲಿ ಅಕ್ರಮ ನಡೆದಿದೆ ಮತ್ತು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರೋಧಿಸಿತ್ತು. ಈ ಪ್ರದೇಶದಲ್ಲಿ 8 ಮಿನಿ ಹೈಡಲ್ ಪ್ರಾಜೆಕ್ಟ್ ಗಳಿದ್ದು ಅದರಿಂದ ನದಿಯ ಸುರಕ್ಷತೆಗೆ ಧಕ್ಕೆಯುಂಟಾಗಲಿದೆ ಎಂದು ಹೈಕೋರ್ಟ್ ನೇಮಿಸಿದ್ದ ಪರಿಸರ ತಜ್ಞರ ಸಮಿತಿ ವರದಿ ನೀಡಿತ್ತು. ಈ ಹಿನ್ನಲೆಯಲ್ಲಿ ಯೋಜನೆಯನ್ನು ಹಿಂದಿನ ಸರ್ಕಾರ ಕೈಬಿಟ್ಟಿತ್ತು.
ಕಳೆದ ವರ್ಷ ಏಪ್ರಿಲ್ 13ರಂದು ಬೆಂಗಳೂರಿನ ಎಂಒಇಇ ಸ್ಥಳೀಯ ಸಶಕ್ತೀಕರಣ ಸಮಿತಿ ಸರ್ಕಾರದ ಯೋಜನೆಯನ್ನು ತಿರಸ್ಕರಿಸಿತ್ತು.ಅಲ್ಲದೆ ಪಯೊನೀರ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಿಂದ 0.5 ಎಕರೆ ಅರಣ್ಯ ಪ್ರದೇಶವನ್ನು ವಶಪಡಿಸಿಕೊಂಡು ರಂಗನಾಥಸ್ವಾಮಿ ಯೋಜನೆಗೆ ಗಡಿರೇಖೆಯನ್ನು ಹಾಕುವಂತೆ ಆದೇಶ ನೀಡಿತ್ತು. ಆದರೆ ನಿಲುವನ್ನು ಬದಲಿಸಿದ ಎಂಒಇಇ ಜುಲೈ 31ರಂದು ಯೋಜನೆಗೆ ಅನುಮೋದನೆ ನೀಡಿತು. ಅರಣ್ಯ ಇಲಾಖೆ ನಂತರ ಅನುಮೋದನೆಗೆ ಯೋಜನೆಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


