ರಾಜ್ಯ

ಕರ್ನಾಟಕದಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ 70,000!

ಹಿಂದಿನ ವರ್ಷಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆಗೆ ಹೋಗದೆ ಹೊರಗೆ ಉಳಿದಿರುವ ಮಕ್ಕಳ ಸಂಖ್ಯೆ ಈ...

ಕರ್ನಾಟಕದಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ 70,000!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹಿಂದಿನ ವರ್ಷಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆಗೆ ಹೋಗದೆ ಹೊರಗೆ ಉಳಿದಿರುವ ಮಕ್ಕಳ ಸಂಖ್ಯೆ ಈ ವರ್ಷ 5 ಪಟ್ಟು ಹೆಚ್ಚಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಡೆಸಿರುವ ಸಮೀಕ್ಷೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಸಮೀಕ್ಷೆಯಲ್ಲಿ ತಿಳಿಸಿರುವ ಪ್ರಕಾರ, ಪ್ರಸ್ತುತ ಶಾಲೆಗೆ ಹೋಗದೆ ಇರುವ ಮಕ್ಕಳ ಸಂಖ್ಯೆ ನಮ್ಮ ರಾಜ್ಯದಲ್ಲಿ 70,116 ಇದ್ದು ಕಳೆದ ವರ್ಷ ಪ್ರಾಥಮಿಕ ಶಿಕ್ಷಣ ಇಲಾಖೆ ನೀಡಿರುವ ಅಧ್ಯಯನ ಪ್ರಕಾರ ಈ ಸಂಖ್ಯೆ 14 ಸಾವಿರ ಆಗಿತ್ತು. ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಶಾಲೆಗೆ ಹೋಗದಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಇಲ್ಲಿ ಸುಮಾರು 10 ಸಾವಿರ ಮಕ್ಕಳಿದ್ದಾರೆ. ನಂತರದ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಕಲಬುರಗಿ ಜಿಲ್ಲೆಗಳಿವೆ.

ಈ ಬಾರಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಸರಿಯಾಗಿ ಲೆಕ್ಕಹಾಕಲು ಶಿಕ್ಷಣ ಇಲಾಖೆ ಬೇರೆ ಇಲಾಖೆಗಳು, ಸಮುದಾಯಗಳು ಮತ್ತು ವಿಶ್ವವಿದ್ಯಾಲಯಗಳ ಜೊತೆ ಸಹಯೋಗ ಹೊಂದಿದೆ. 2018-19ನೇ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ ಶಿಕ್ಷಣ ಇಲಾಖೆ 14,192 ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿದೆ.

ಸರ್ವ ಶಿಕ್ಷ ಅಭಿಯಾನದ ರಾಜ್ಯ ಯೋಜನ ನಿರ್ದೇಶಕ ಎಂಟಿ ರೇಜು, ಈ ವರ್ಷ 16 ವರ್ಷದವರೆಗಿನ ಮಕ್ಕಳ ಮೇಲೆ ಸಮೀಕ್ಷೆ ನಡೆಸಲಾಗಿದೆ. ಮಕ್ಕಳು ಶಾಲೆಯಿಂದ ಹೊರಗುಳಿಯಲು ಕಾರಣವೇನು ಎಂದು ಕೂಡ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. ಪೋಷಕರ ವಲಸೆ, ಮಕ್ಕಳಲ್ಲಿ ಕಲಿಕೆಯಲ್ಲಿ ನಿರಾಸಕ್ತಿ, ಪೋಷಕರು ಮಕ್ಕಳನ್ನು ಅದರಲ್ಲೂ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಸಕ್ತಿ ತೋರುವುದು ಇತ್ಯಾದಿ ಕಾರಣಗಳಾಗಿವೆ ಎಂದು ತಿಳಿದುಬಂದಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.