ಹಂಪಿ ಸ್ಮಾರಕಗಳಿಗೆ ಹಾನಿ: ಅಪರಾಧಿಗಳ ಶೋಧಕ್ಕಾಗಿ ಬಿಹಾರಕ್ಕೆ ತೆರಳಿದ ಬಳ್ಳಾರಿ ಪೊಲೀಸರು!
ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಅಪರಾಧಿಗಳನ್ನು ಪತ್ತೆ ಹಚ್ಚಲು ಬಳ್ಳಾರಿ ಪೊಲೀಸರು ಬಿಹಾರಕ್ಕೆ ತೆರಳಿದ್ದಾರೆ...

Published On :
ಬಳ್ಳಾರಿ: ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಅಪರಾಧಿಗಳನ್ನು ಪತ್ತೆ ಹಚ್ಚಲು ಬಳ್ಳಾರಿ ಪೊಲೀಸರು ಬಿಹಾರಕ್ಕೆ ತೆರಳಿದ್ದಾರೆ,
ಹಂಪಿಯಲ್ಲಿ ಸ್ಮಾರಕಗಳನ್ನು ಧ್ವಂಸಗೊಳಿಸಿದ ವಿಡಿಯೋ ಕಳೆದ ವಾರ ವೈರಲ್ ಆಗಿತ್ತು. ಬೆಂಗಳೂರು ಮೂಲದ ರ್ಯಾಪರ್ ಔಶ್ ಶಹಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಟ್ಟಿದ್ದರು. ಈ ವಿಡಿಯೋ ನೋಡಿ ಸಾಕಷ್ಟು ಮಂದಿ ಕಿಡಿ ಕಾರಿದ್ದರು.
ಈ ಸಂಬಂಧ ಪ್ರಾಚ್ಯ ಸಂಶೋಧನಾ ಇಲಾಖೆ ದೂರು ದಾಖಲಿಸಿತ್ತು. ಬಳ್ಳಾರಿ ಪೊಲೀಸರು ಬಿಹಾರ ತಲುಪಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ಬಗ್ಗೆ ಸುಳಿವು ಸಿಕ್ಕಿದ್ದು, ವಿಡಿಯೋ ಜೊತೆ ಪೊಲೀಸರು ಬಿಹಾರ ತಲುಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,ಪ್ರಕರಣ ಸಂಬಂಧ ಕೆಲವು ಸ್ಥಳೀಯರನ್ನು ವಿಚಾರಣೆ ನಡೆಸಲಾಗಿದೆ, ಸದ್ಯ ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


