ರಾಜ್ಯ

ವಿಜಯಪುರ: ಟಂಟಂ ಆಟೋಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಐವರು ಸಾವು

ಟಂಟಂ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.

ವಿಜಯಪುರ: ಟಂಟಂ ಆಟೋಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಐವರು ಸಾವು
ಅಪಘಾತಕ್ಕಿಡಾದ ಆಟೋ
Published On :
ವಿಜಯಪುರ: ಟಂಟಂ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.
ಇಂದು ಸಂಜೆ ಬರಟಗಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಟಂಟಂನಲ್ಲಿದ್ದ ಎರಡು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಚಾಲಕ ಮೃತಪಟ್ಟಿದ್ದಾರೆ.
ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಅರವಿಂದ ಅಗಸರ(32) ಮೃತ ಚಾಲಕ. ಮೃತರೆಲ್ಲರೂ ಡೋಣುರ ಗ್ರಾಮದವರು.
ಡಿಕ್ಕಿಯಾದ ರಭಸಕ್ಕೆ ಟಂಟಂ ಪಲ್ಟಿಯಾಗಿದ್ದು, ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. 
ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.