ದೇಶಾದ್ಯಂತ ವಕೀಲರ ಪ್ರತಿಭಟನೆ: ಬೆಂಗಳೂರಿನಲ್ಲಿ ಕೋರ್ಟ್ ಕಲಾಪದಿಂದ ಹೊರಗುಳಿದು ವಕೀಲರು
'ವಕೀಲರ ರಕ್ಷಣೆ ಕಾಯ್ದೆ' ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಂಗಳವಾರ ದೇಶಾದ್ಯಂತ ಪ್ರತಿಭಟನೆ...

Published On :
ಬೆಂಗಳೂರು: 'ವಕೀಲರ ರಕ್ಷಣೆ ಕಾಯ್ದೆ' ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲೂ ವಕೀಲರು ಕೋರ್ಟ್ ಕಲಾಪದಿಂದ ಹೊರಗುಳಿಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಾರ್ ಕೌನ್ಸಿಲ್ ಆಫ್ ಇಂಡಿಯಾ ನೀಡಿರುವ ಪ್ರತಿಭಟನಾ ಕರೆಗೆ ಬೆಂಗಳೂರು ವಕೀಲರ ಸಂಘ ಬೆಂಬಲ ಸೂಚಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿತು.
ಕೋರ್ಟ್ ಕಲಾಪಗಳಿಂದ ಹೊರಗುಳಿದ ವಕೀಲರು ಸಿಟಿ ಸಿವಿಲ್ ಕೋರ್ಟ್ ನಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ವಕೀಲರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬಜೆಟ್ ನಲ್ಲಿ ವಕೀಲರಿಗೆ ಯಾವುದೇ ಸೌಲಭ್ಯ ನೀಡದೇ ತಮ್ಮನ್ನು ತಿರಸ್ಕರಿಸಿದೆ ಎಂದು ಆರೋಪಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruವಕೀಲರ ಪ್ರತಿಭಟನೆBCI nationwide protestCourt proceedings affectedಕೋರ್ಟ್ ಕಲಾಪಕ್ಕೆ ಅಡ್ಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


