ಕಳ್ಳತನ ಮಾಡಬೇಡಿ ಎಂದಿದ್ದ ಸೂಪರ್‌ವೈಜರ್ ಕೊಲೆ: ನಾಲ್ವರ ಬಂಧನ
ಕಬ್ಬಿಣದ ಪೈಪ್ ಕಳವಿನಲ್ಲಿ ತೊಡಗಿದ್ದವರ ವಿರುದ್ಧ ದೂರು ನೀಡಲು ಮುಂದಾಗಿದ್ದ ಸೂಪರ್‌ವೈಜರ್ ನ್ನನ್ನು ಕೊಲೆ ಮಾಡಿದ್ದ ಆರೋಪದಡಿ ಬೆಂಗಳೂರು ಪೋಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Published On :
ಬೆಂಗಳೂರು: ಕಬ್ಬಿಣದ ಪೈಪ್ ಕಳವಿನಲ್ಲಿ ತೊಡಗಿದ್ದವರ ವಿರುದ್ಧ ದೂರು ನೀಡಲು ಮುಂದಾಗಿದ್ದ ಸೂಪರ್‌ವೈಜರ್ ನ್ನನ್ನು ಕೊಲೆ ಮಾಡಿದ್ದ ಆರೋಪದಡಿ ಬೆಂಗಳೂರು ಪೋಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಗಾಂಧಿನಗರದ ಮಹಮದ್ ಏಜಾಜ್ ಷರೀಫ್, ಮಹಮದ್ ಪ್ಯಾರು, ಸುಹೇಲ್ ಅಹಮದ್ ಹಾಗೂ ಸುಬ್ರಮಣ್ಯಪುರ ನಿವಾಸಿ ಇಸ್ಮಾಯಿಲ್ ಎನ್ನುವವರನ್ನು ಕಗ್ಗಲಿಪುರ ಪೋಲೀಸರು ಬಂಧಿಸಿದ್ದಾರೆ.
ಕನಕಪುರ ಮುಖ್ಯರಸ್ತೆ ಕಗ್ಗಲೀಪುರ ಟೌನ್ ಕೆರೆ ಸಮೀಪದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿಉದ್ದ ವೇಳೆ ಫೆ.7ರಂದು ಅಪರಿಚಿತ ವ್ಯಕ್ತಿಯ ಮೃತದೇಹವೊಇಂದು ಗೊಣಿ ಚೀಲದಲ್ಲಿ ಪತ್ತೆಯಾಗಿತ್ತು. ವ್ಯಕ್ತಿಯ ಎರಡು ಕಾಲನ್ನು ಕತ್ತರಿಸಿ ಗೋಣಿಚೀಲದಲ್ಲಿ ತುಂಬಿಸಿ ದುಷ್ಕರ್ಮಿಗಳು ಎಸೆದು ಹೋಗಿದ್ದರು.
ಘಟನೆಯ ಕುರಿತು ತನಿಖೆ ಕೈಗೊಂಡ ಕಗ್ಗಲಿಪುರ ಪೋಲೀಸರಿಗೆ ಆತ ಆಂಧ್ರಪ್ರದೇಶ ಕಡಪ ಜಿಲ್ಲೆ ಪುಲಿವೆಂದಲ ತಾಲೂಕಿನ ಗಂಗಾರಪುವಂಡ್ಲಪಲ್ಲಿ ಗ್ರಾಮದ ಸಗಿಲಿ ನಾಗೇಶ್ವರರೆಡ್ಡಿ (32) ಎಂದು ತಿಳಿದು ಬಂದಿದೆ.ರಸ್ತೆ ಅಗಲೀಕರಣ ಕಾಮಗಾರಿ ನಡೆಸುವ ಸ್ಥಳದಲ್ಲಿ ಜೀಪ್ ಚಾಲಕನಾಗಿದ್ದ ಏಜಾಜ್ ಕಾಮಗಾರಿಗೆ ಬಳಸುವ ಕಬ್ಬಿಣದ ಪೈಪ್ ಗಳನ್ನು ಕಳವು ಮಾಡುತ್ತಿದ್ದ. ಈತ ಇತರೆ ಮೂವರೊಡನೆ ಸೇರಿ ಈ ರೀತಿ ಕಬ್ಬಿಣದ ವಸ್ತುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ. ಇದರ ಕುರಿತು ತಿಳಿದ ಸೂಪರ್‌ವೈಜರ್ ನಾಗೇಶ್ವರರೆಡ್ಡಿ ಈ ರೀತಿ ಕಳವು ಮಾಡಬೇಡಿ ಎಂದು ಹೇಳಿದ್ದಲ್ಲದೆ ಹೀಗೊಮ್ಮೆ ಮುಂದುವರಿದರೆ ಆತನನ್ನು ಕೆಲಸದಿಂದ ಬಿಡಿಸಿ ಪೋಲೀಸರಿಗೆ ದೂರು ಸಲ್ಲಿಸುವುದಾಗಿ ಎಚ್ಚರಿಸಿದ್ದ. ಇದರಿಂದ ಬೇಸತ್ತ ನಾಲ್ವರೂ ಸೇರಿ ನಾಗೇಶ್ವರರೆಡ್ಡಿಯನ್ನು ಸಂಚು ರೂಪಿಸಿ ಕೊಂದು ಹಾಕಿದ್ದಾರೆ.
ಕೃತ್ಯ ಹೊರಗೆ ಬರಬಾರದೆಂದು ಶವದ ಕಾಲನ್ನು ಕತ್ತರಿಸಿ ಮ್ಯಾನ್ ಹೋಲೆಗೆ ಎಸೆದ ದುಷ್ಕರ್ಮಿಗಳು ಮೃತದೇಹವನ್ನು ಚೀಲದಲ್ಲಿ ತುಂಬಿ ಕಗ್ಗಲಿಪುರ ಕೆರೆ ಸಮೀಪ ಎಸೆದು ಹೋಗೊದ್ದರು.
ಪ್ರಕರಣ ಬೇಧಿಸಿರುವ ಪೋಲೀಸರು ಇದೀಗ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನ, ಆಯುಧ ಸೇರಿ ಕಳ್ಳತನವಾಗಿದ್ದ ಸುಮಾರು ಮೂರೂವರೆ ಟನ್ ತೂಕದ ಕಬ್ಬಿಣದ ಸಾಮಾನುಗಳನ್ನೂ ವಶಕ್ಕೆ ಪಡೆಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


