ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ
ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.

Published On :
ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.
ನಕ್ಸಲ್ ಪೀಡಿತ ಪ್ರದೇಶವಾಗಿರುವ ಮೂಡಿಗೆರೆ ತಾಲೂಕಿನ ಬಸರೀಕಲ್ ಚೆಕ್‍ಪೋಸ್ಟ್ ನಲ್ಲಿ ಈ ಘಟನೆ ವರದಿಯಾಗಿದ್ದು ಇದು ನಕ್ಸಲ್ ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ.
ಭಾನುವಾರ ಬೆಳಗಿನ ಜಾವ 3.30ರ ಸುಮಾರಿಗೆ ಪೆಟ್ರೋಲ್ ಬಾಂಬೆಸೆದ ದುಷ್ಕರ್ಮಿಗಳು ಕತ್ತಲಲ್ಲಿ ಪರಾರಿಯಾಗಿದ್ದಾರೆ.ಆರು ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು ಅದರಲ್ಲೊಂದು ಬೆಂಕಿ ಹತ್ತಿಕೊಂಡಿದ್ದು ರಟ್ಟಿನ ಪೆಟ್ಟಿಗೆಯಲ್ಲಿದ್ದ ಕಾಗದ ಪತ್ರಗಳು ಸುಟ್ಟು ಹೋಗಿದೆ.
ಬಾಟಲಿ ಶಬ್ದ ಕೇಳಿದ ಸಿಬ್ಬಂದಿಗಳು ಠಾಣೆಯಿಂದ ಹೊರಕ್ಕೆ ಓಡಿ ಬಂದಿದ್ದರೂ ಕೃತ್ಯ ಎಸಗಿದವರ ಪತ್ತೆಹಚ್ಚಲಾಗಿಲ್ಲ.
ಘಟನೆ ಕುರಿತು ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


