ಬೆಂಗಳೂರು: ಪುಲ್ವಾಮಾ ಉಗ್ರ ದಾಳಿ ಸಂಭ್ರಮಿಸಿದ್ದ ಕಾಶ್ಮೀರಿ ವಿದ್ಯಾರ್ಥಿಯ ಬಂಧನ
ಕಳೆದ ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಸಂಭ್ರಮಿಸಿದ ಮತ್ತು ಜೈಶ್ -ಇ-ಮೊಹಮ್ಮದ ಸಂಘಟನೆಯನ್ನು....

Published On :
ಬೆಂಗಳೂರು: ಕಳೆದ ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಸಂಭ್ರಮಿಸಿದ ಮತ್ತು ಜೈಶ್ -ಇ-ಮೊಹಮ್ಮದ ಸಂಘಟನೆಯನ್ನು ಹೊಗಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ತಾಹೀರ್ ಲತೀಫ್ ನನ್ನು ಶನಿವಾರ ಬಾಗಲೂರು ಪೊಲೀರು ಬಂಧಿಸಿದ್ದಾರೆ.
ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ 23 ವರ್ಷದ ತಾಹೀರ್ ಲತೀಫ್ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತ ಆರೋಪಿ. ದಾಳಿ ನಡೆಸಿದ ಉಗ್ರನ ಪರವಾಗಿ ಫೇಸ್ ಬುಕ್ ನಲ್ಲಿ ಬಿಗ್ ಸೆಲ್ಯೂಟ್ , ನಿನಗೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂದು ಬರೆದುಕೊಂಡಿದ್ದನು.
ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಲತೀಫ್ ವಿರುದ್ದ ಪೊಲೀಸರು ಅಪರಾಧಿಕ ಒಳಸಂಚು ಕೃತ್ಯಕ್ಕೆ ಬೆಂಬಲಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


