ಪುಲ್ವಾಮಾ ದಾಳಿ: ದೇಶದ್ರೋಹ ಪ್ರಕರಣದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಸೆರೆ
ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:ಪುಲ್ವಾಮಾದಲ್ಲಿ ನಡೆದ ಯೋಧರ ಹತ್ಯೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಹೊರವಲಯ ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದ ಗ್ರಾಮದ ಹ್ಯಾರಿಸ್ ಮಂಜೂರ್ ಸೊಪೋರೆ ಗ್ರಾಮದ ಗೌಹಾರ್ ಮುಷ್ತಾಕ್, ಹಾಗೂ ಕುಪ್ವಾರಾ ಗ್ರಾಮದ ಜಾಹೀರ್ ಮುಕ್ ಬುಲ್ ಬಂಧಿತರು.
ಪಶ್ಚಿಮ ಬಂಗಾಳ ಮೂಲದ ಕೌಶಿಕ್ ದೆಬ್ ನಾಥ್ ಹಲ್ಲೆಗೊಳಗಾಗಿದ್ದು, ಕಾಲೇಜು ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಆರೋಪಿಗಳನ್ನು ಬೆಂಗಳೂರು ಹೊರವಲಯದ ಮರಸೂರು ಗೇಟ್ ಬಳಿಯಿರುವ ಸ್ಪೂರ್ತಿ ಎಂಬ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಇದೇ ಕಾಲೇಜಿನಲ್ಲಿ ಪಶ್ಚಿಮ ಬಂಗಾಳ ಮೂಲದ ಕೌಶಿಕ್ ದೆಬ್ ನಾಥ್ ಕೂಡಾ ವ್ಯಾಸಂಗ ಮಾಡುತ್ತಿದ್ದಾನೆ.
ಪುಲ್ವಾಮಾದಲ್ಲಿ ನಡೆದ ಹತ್ಯೆಯನ್ನು ವಿರೋಧಿಸಿ ಕೌಶಿಕ್ ಹುತಾತ್ಮ ಯೋಧರ ಕುರಿತು ಪೋಟೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿದ್ದರು. ಈ ಪೋಸ್ಟ್ ನೋಡಿದ ಮೂವರು ಆರೋಪಿಗಳು ಯೋಧರ ಕುರಿತ ಅವಹೇಳನಕಾರಿ ಹೇಳಿಕೆ ನೀಡಿದರಲ್ಲದೇ, ದೆಬ್ ನಾಥ್ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


