ಕಲಬುರಗಿ: ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಭೀಕರ ಕೊಲೆ!
ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ...

Published On :
ಕಲಬುರಗಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾವರಗೇರಾ ಕ್ರಾಸ್ ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ನ 30 ವರ್ಷದ ಜಲಾಲ್ ಕೊಲೆಯಾದ ಧರ್ಮ ಪ್ರಚಾರಕ. ಇತ ಕಳೆದ ಐದಾರು ತಿಂಗಳಿನಿಂದ ಕಲಬುರಗಿಯಲ್ಲಿ ಪಾಕಿಸ್ತಾನದ ಅಹ್ಮದ್ ಇಸಾ ಪಂಥದ ಪ್ರಚಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ 20ಕ್ಕೂ ಹೆಚ್ಚು ಯುವಕರ ತಂಡ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾರೆ.
ಈ ಸಂಬಂಧ ಪೊಲೀಸರು 14 ಜನರನ್ನು ಬಂಧಿಸಿದ್ದಾರೆ. ಜಲಾಲ್ ನನ್ನು ತಾಜಸುಲ್ತಾನಪುರ ಬಳಿ ಕರೆದೊಯ್ದು ನಂತರ ತಾವರಗೇರಾ ಕ್ರಾಸ್ ಬಳಿ ಕುತ್ತಿಗೆ, ಹೊಟ್ಟೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ ಮಾಡಿದ ಯುವಕರು ಸುನ್ನಿ ಮತ್ತು ಶಿಯಾ ಪಂಗಡಕ್ಕೆ ಸೇರಿದವರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


