ಬೆಂಗಳೂರು ಏರ್ ಷೋ ತಾಲೀಮು ವೇಳೆ ಅವಘಡ: 2 ಸೂರ್ಯಕಿರಣ್ ಜೆಟ್ ಗಳ ಡಿಕ್ಕಿ, ಓರ್ವ ಪೈಲಟ್ ಸಾವು
ತೀವ್ರ ಕುತೂಹಲ ಕೆರಳಿಸಿರುವ ಏರೋ ಇಂಡಿಯಾ 2019ಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬೆಂಗಳೂರು ಏರ್ ಷೋ ವೇಳೆ ಅವಘಡವೊಂದು ಸಂಭವಿಸಿದ್ದು,...

Published On :
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಏರೋ ಇಂಡಿಯಾ 2019ಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬೆಂಗಳೂರು ಏರ್ ಷೋ ವೇಳೆ ಅವಘಡವೊಂದು ಸಂಭವಿಸಿದ್ದು, ತಾಲಿಮೀನಲ್ಲಿ ನಿರತವಾಗಿದ್ದ ಎರಡು ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿಯಾಗಿ ಪತನವಾಗಿವೆ.
ಅಪಘಾತದಲ್ಲಿ ಪೈಲಟ್ ಸಾಹಿಲ್ ಗಾಂಧಿ ಮೃತಪಟ್ಟಿದ್ದಾರೆ ಎಂದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟಪಡಿಸಿದ್ದಾರೆ.
ಏರೋ ಇಂಡಿಯಾ 2019ರ ನಿಮಿತ್ತ ಯಲಹಂಕ ವಾಯುನೆಲೆಯಲ್ಲಿ ಭಾರತೀಯ ಸೇನೆಯ ಯುದ್ಧ ವಿಮಾನಗಳು ತಾಲೀಮಿನಲ್ಲಿ ನಿರತವಾಗಿದ್ದು, ಈ ವೇಳೆ ಸೇನೆಯ ಸೂರ್ಯಕಿರಣ್ ಯುದ್ಧ ವಿಮಾನಗಳು ಪರಸ್ಪರ ಢಿಕ್ಕಿ ಹೊಡೆದು ಪತನವಾಗಿವೆ. ಈ ವೇಳೆ ವಾಯುನೆಲೆಯ ಕಾಪೌಂಡ್ ಬಳಿ ವಿಮಾನಗಳು ಹೊತ್ತಿ ಉರಿದು ಬಿದ್ದಿದ್ದು, ಬೆಂಕಿ ಕೆನ್ನಾಲಿಗೆಗೆ ಸಮೀಪದ ಒಂದು ಮನೆಯ ಗೋಡೆ ಹಾಗೂ ಹಸುವಿನ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.
ಯಲಹಂಕ ಬಳಿಯ ಜನವಸತಿ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, 2 ವಿಮಾನಗಳಲ್ಲಿ ಇಬ್ಬರು ಪೈಲಟ್ ಗಳು ಮತ್ತೋರ್ವ ಸಹ ಪೈಲಟ್ ಇದ್ದರು ಎಂದು ತಿಳಿದುಬಂದಿದೆ, ಈ ಪೈಕಿ ಇಬ್ಬರು ಪೈಲೆಟ್ ಗಳು ವಿಮಾನದಿಂದ ಹೊರ ಜಿಗಿದಿದ್ದು, ಇನ್ನು ಓರ್ವ ಪೈಲಟ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಏರೋ ಇಂಡಿಯಾ ಪ್ರದರ್ಶನದಲ್ಲಿ ಅತ್ಯಂತ ಆಕರ್ಷಣೆಯ ಕೇಂದ್ರ ಬಿಂದುವಾದ ಸೂರ್ಯಕಿರಣ್ ಜೆಟ್ ವಿಮಾನಗಳು ವಾಯು ಮಾರ್ಗದಲ್ಲಿ ಕಸರತ್ತು ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ ತಕ್ಷಣ 10 ಅಗ್ನಿ ಶಾಮಕ ವಾಹನಗಳು ತೆರಳಿ ಬೆಂಕಿ ನಂದಿಸುವ ಮತ್ತು ರಕ್ಞಣಾ ಕಾರ್ಯದಲ್ಲಿ ನಿರತವಾದವು. ತಾಲೀಮು ಮುಗಿದ ನಂತರ ವಿಮಾನಗಳನ್ನು ಇಳಿಸುವ ವೇಳೆಯಲ್ಲಿ ಒಂದು ವಿಮಾನ ಮತ್ತೊಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ನಂತರ ಬೆಂಕಿ ಹೊತ್ತಿಕೊಂಡು ಉರಿದಿದೆ ಎನ್ನಲಾಗಿದೆ.
ಪರಸ್ಪರ ಡಿಕ್ಕಿ ಹೊಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಭಾರೀ ಸದ್ದು ಕೇಳಿ ಬಂದಿದ್ದು, ಬೆಂಕಿ ಸಮೀಪದ ಮನೆಯೊಂದನ್ನು ಆವರಿಸಿತು ಎನ್ನಲಾಗಿದೆ. ಪೈಲೆಟ್ ಗಳು ಪ್ಯಾರಾಚ್ಯೂಟ್ ಮೂಲಕ ಕೆಳಗಿಳಿಯಲು ಪ್ರಯತ್ನಿಸಿದರು. ಈ ಪೈಕಿ ಓರ್ವ ಪೈಲೆಟ್ ನೆಲಕ್ಕೆ ಬಿದ್ದರೆಂದು ಅಲ್ಲಿದ್ದ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡಿರುವ ಪೈಲೆಟ್ ಅನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ವಾಯುಪಡೆ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಇನ್ನು ಎರಡೂ ವಿಮಾನಗಳ ಪೈಲಟ್ ಗಳು ಅಪಘಾತಕ್ಕೂ ಮುನ್ನ ಇಜೆಕ್ಟ್ ಆದ ಹಿನ್ನೆಲೆಯಲ್ಲಿ ಅವರ ಪ್ರಾಣಕ್ಕೆ ಹಾನಿಯಾಗಿಲ್ಲ ಎಂದು ಹೇಳಲಾಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಾಳೆಯಿಂದ ಆರಂಭವಾಗಬೇಕಿದ್ದು, 170 ಕ್ಕೂ ಹೆಚ್ಚು ಕಂಪೆನಿಗಳು ಈ ಪ್ರದರ್ಶನದಲ್ಲಿ ಪಾಲ್ಗೊಂಡಿವೆ. ಇದರಲ್ಲಿ 35 ವಿದೇಶಿ ವೈಮಾನಿಕ ಕಂಪೆನಿಗಳು ಎನ್ನಲಾಗಿದೆ.
ಇನ್ನು ಸ್ಕ್ವಾಡ್ರನ್ ಲೀಡರ್ ವಿಜಯ್ ಶೇಳ್ಕೆ ನೇತೃತ್ವದಲ್ಲಿ ಸೂರ್ಯಕಿರಣ್ ಹಾಕ್ ಯುದ್ಧ ವಿಮಾನಗಳ ತಾಲೀಮು ನಡೆಯುತ್ತಿತ್ತು ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ವಿಂಗ್ ಕಮಾಂಡರ್ ಸಾಹಿಲ್ ಗಾಂಧಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತನಿಖೆಗೆ ರಕ್ಷಣಾ ಸಚಿವಾಲಯ ಆದೇಶ
ಎರಡು ಸೂರ್ಯ ಕಿರಣ್ ವಿಮಾನಗಳ ನಡುವೆ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯ ತನಿಖೆಗೆ ಆದೇಶಿಸಿದೆ.
ಯಲಹಂಕದ ಇಸ್ರೋ ಬಡಾವಣೆ ಸಮೀಪ ಬೆಳಗ್ಗೆ 11.50 ಗಂಟೆಗೆ ಸರಿಯಾಗಿ ವಾಯು ಮಾರ್ಗದಲ್ಲೇ ಈ ಅಪಘಾತ ಸಂಭವಿಸಿದ್ದು, ಒಂದು ವಿಮಾನ ಮತ್ತೊಂದು ವಿಮಾನದ ರೆಕ್ಕೆಗೆ ಬಡಿದು ದುರಂತ ಸಂಭವಿಸಿದೆ. ಈ ಸಂದರ್ಭದಲ್ಲಿ ಒಟ್ಟು ಮೂವರು ಪೈಲೆಟ್ ಗಳಿದ್ದರು. ಇಬ್ಬರು ಪೈಲೆಟ್ ಗಳು ರಭಸವಾಗಿ ಸಂಚರಿಸುತ್ತಿದ್ದ ವಿಮಾನದಿಂದ ಜಿಗಿದಿದ್ದು, ಅವರನ್ನು ಕಮಾಂಡೋ ಆಸ್ಪತ್ರೆಗೆ ಸೇರಿಸಲಾಗಿದೆ. ಮೂರನೇ ಪೈಲೆಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಆಸ್ತಿ ಪಾಸ್ತಿ ಹಾನಿಯ ಬಗ್ಗೆ ಅಂದಾಜು ಮಾಡುತ್ತಿದ್ದಾರೆ.
ಎರಡು ಸೂರ್ಯ ಕಿರಣ್ ವಿಮಾನಗಳ ನಡುವೆ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯ ತನಿಖೆಗೆ ಆದೇಶಿಸಿದೆ.
ಯಲಹಂಕದ ಇಸ್ರೋ ಬಡಾವಣೆ ಸಮೀಪ ಬೆಳಗ್ಗೆ 11.50 ಗಂಟೆಗೆ ಸರಿಯಾಗಿ ವಾಯು ಮಾರ್ಗದಲ್ಲೇ ಈ ಅಪಘಾತ ಸಂಭವಿಸಿದ್ದು, ಒಂದು ವಿಮಾನ ಮತ್ತೊಂದು ವಿಮಾನದ ರೆಕ್ಕೆಗೆ ಬಡಿದು ದುರಂತ ಸಂಭವಿಸಿದೆ. ಈ ಸಂದರ್ಭದಲ್ಲಿ ಒಟ್ಟು ಮೂವರು ಪೈಲೆಟ್ ಗಳಿದ್ದರು. ಇಬ್ಬರು ಪೈಲೆಟ್ ಗಳು ರಭಸವಾಗಿ ಸಂಚರಿಸುತ್ತಿದ್ದ ವಿಮಾನದಿಂದ ಜಿಗಿದಿದ್ದು, ಅವರನ್ನು ಕಮಾಂಡೋ ಆಸ್ಪತ್ರೆಗೆ ಸೇರಿಸಲಾಗಿದೆ. ಮೂರನೇ ಪೈಲೆಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಆಸ್ತಿ ಪಾಸ್ತಿ ಹಾನಿಯ ಬಗ್ಗೆ ಅಂದಾಜು ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruIndian Air Forceವಿಮಾನ ಅಪಘಾತFlight AccidentAero India 2019ಏರೋ ಇಂಡಿಯಾ 2019Surya Kiran Jet Flightsಇಂಡಿಯನ್ ಏರ್ ಫೋರ್ಸ್ಸೂರ್ಯ ಕಿರಣ್ ಜೆಟ್ ವಿಮಾನಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


