ರಾಜ್ಯ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕರು

ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ 28 ವರ್ಷದ ಮಹಿಳೆಯನ್ನು ಯುವ ಸಾಮಾಜಿಕ ಕಾರ್ಯಕರ್ತರ ತಂಡವೊಂದು ರಕ್ಷಿಸಿರುವ ಘಟನೆ ನಡೆದಿದೆ.

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕರು
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಲುಕಿ  ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ 28 ವರ್ಷದ ಮಹಿಳೆಯನ್ನು ಯುವ ಸಾಮಾಜಿಕ ಕಾರ್ಯಕರ್ತರ ತಂಡವೊಂದು ರಕ್ಷಿಸಿರುವ  ಘಟನೆ ನಡೆದಿದೆ.

ಸುಷ್ಮಾ( ಹೆಸರು ಬದಲಾಯಿಸಲಾಗಿದೆ) ಶಹಾಪುರದ ತಾನಾಜಿ ಗಲ್ಲಿ ನಿವಾಸಿಯಾದ ಈ ಮಹಿಳೆ ಸಂಬಂಧಿಕರಿಂದ ಆಗುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳುವ ಸಲುವಾಗಿ  ಮೂರು ಹಾಗೂ ಒಂದು ವರ್ಷದ ಪುಟ್ಟ ಮಕ್ಕಳೊಂದಿಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ.

ತಾನಾಜಿ ಗಲ್ಲಿ ರೈಲ್ವೆ ಹಳಿಗಳತ್ತ ಸಾಗುತ್ತಿದ್ದ ಮಹಿಳೆಯನ್ನು ಗಮನಿಸಿದ ಯುವಕರು, ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಬರುತ್ತಿರುವುದಾಗಿ ಶಂಕಿಸಿದ್ದಾರೆ. ನಂತರ ಅಲ್ಲಿಗೆ ಧಾವಿಸಿ ಮಹಿಳೆ ಹಾಗೂ ಆಕೆಯ ಮಕ್ಕಳನ್ನು ರಕ್ಷಿಸಿದ್ದಾರೆ.

ಸುಷ್ಮಾ ಪತಿ ಶಹಾಪುರದಲ್ಲಿ ಅಭರಣ ಮಳಿಗೆ ಇಟ್ಟುಕೊಂಡಿದ್ದು, ಅವರು ಪಟ್ಟಣದಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪೊಲೀಸರಿಗೆ ಸುದ್ದಿ ಮುಟ್ಟಿಸಲಾಯಿತಾದರೂ ಯಾವುದೇ  ಪ್ರಕರಣ ದಾಖಲಿಸಿಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.