ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯಲ್ಲಿ 25 ಲಕ್ಷ ಭಕ್ತಾದಿಗಳು ಬಾಗಿ
ಮಂಗಳವಾರ ನಡೆದ ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಸುಮಾರು 25 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದರು....

Published On :
ಬೆಳಗಾವಿ: ಮಂಗಳವಾರ ನಡೆದ ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಸುಮಾರು 25 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದರು.
ತಮಿಳುನಾಡು, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮತ್ತು ಗೋವಾದಿಂದ ಭಕ್ತಾದಿಗಳು ಆಗಮಿಸಿದ್ದರು. ಹೆಚ್ಚಿನ ಪ್ರಮಾಣದಲ್ಲಿ ರೈತರು ಎತ್ತಿನ ಗಾಡಿ ಮೂಲಕ ಆಗಮಿಸಿದ್ದರು.
ಬೆಳಗಾವಿ, ಬಾಗಲಕೋಟೆ,ಧಾರವಾಡ, ಸವದತ್ತಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಂದ ಬರುವ ಭಕ್ತಾದಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ, ಈ ಭಾಗದ ಜನರು ಎತ್ತಿನಗಾಡಿಯಲ್ಲಿ ಬರುವ ಪದ್ಧತಿ ದಶಕಗಳಿಂದಲೂ ನಡೆದುಕೊಂಡು ಬಂದಿದೆ. ಸುಮಾರು 70 ಸಾವಿರ ಎತ್ತಿನ ಗಾಡಿಗಳು ಸವದತ್ತಿಗೆ ಆಗಮಿಸಿದ್ದವು.
ಭಕ್ತಾಧಿಗಳ ಸೌಕರ್ಯಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿತ್ತು ಎಂದು ಜಾತ್ರೆಗೆ ಆಗಮಿಸಿದ್ದ ಭಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


