ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ,ಮಾಜಿ ಶಾಸಕಿ ಶಾರದಮ್ಮ ನಿಧನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ....

Published On :
ಬೆಳಗಾವಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಮದುರ್ಗದಿಂದ ಅವರು 1967-72ರ ಅವಧಿಯಲ್ಲಿ ಪ್ರಥಮ ಮಹಿಳಾ ಶಾಸಕಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.
ಶಾರದಮ್ಮ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಶಾಸಕ ದಿ.ಮಹದೇವಪ್ಪ ಪಟ್ಟಣ್ ಅವರ ಪತ್ನಿಯಾಗಿದ್ದಾರೆ.
ಮಹದೇವಪ್ಪ ಪಟ್ಟಣ್ ಅವರು ಕಳೆದ ವರ್ಷವಷ್ಟೇ ನಿಧನರಾಗಿದ್ದರು. 2013ರಲ್ಲಿ ರಾಮದುರ್ಗ ಕ್ಷೇತ್ರದಿಂದ ಅವರ ಪುತ್ರ ಅಶೋಕ್ ಪಟ್ಟಣ್ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆದರೆ 2018ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
ಇಂದು ಸಂಜೆ ರಾಮದುರ್ಗದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


